

ನಿಪ್ಪಾಣಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ(ವಿಟಿಯು) ಅಂತರಕಾಲೇಜು ಪುರುಷರ ಹಗ್ಗಜಗ್ಗಾಟ ಪಂದ್ಯಾವಳಿಯಲ್ಲಿ ವಿಎಸ್‌ಎಂ ಸೋಮಶೇಖರ ಆರ್.ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿತು.
ವಿಟಿಯೂ ಮತ್ತು ವಿಎಸ್‌ಎಂಎಸ್‌ಆರ್‌ಕೆಐಟಿ ಆಶ್ರಯದಲ್ಲಿ ಈಚೆಗೆ ನಡೆದ ವಿಎಸ್‌ಎಂಎಸ್‌ಆರ್‌ಕೆಐಟಿನಲ್ಲಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದ ಪಂದ್ಯಾವಳಿಗೆ ಆಯ್ಕೆಗೊಂಡಿದೆ. ಪ್ರಶಸ್ತಿ ಪಡೆದ ತಂಡಕ್ಕೆ ವಿದ್ಯಾ ಸಂವರ್ಧಕ ಮಂಡಳದ ಅಧ್ಯಕ್ಷ ಚಂದ್ರಕಾಂತ ಕೋಠಿವಾಲೆ, ಎಂಬಿಎ-ಎಂಸಿಎ ಮಹಾವಿದ್ಯಾಲಯದ ಉಪಾಧ್ಯಕ್ಷ ಪಪ್ಪು ಪಾಟೀಲ, ಕಾರ್ಯದರ್ಶಿ ಸಮೀರ ಬಾಗೇವಾಡಿ, ಸಂಚಾಲಕ ಅವಿನಾಶ ಪಾಟೀಲ, ವಕೀಲ ಸಂಜಯ ಶಿಂತ್ರೆ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಸಿಇಒ ಡಾ.ಸಿದ್ದಗೌಡ ಪಾಟೀಲ, ಪ್ರಾಚಾರ್ಯ ಡಾ.ಉಮೇಶ ಪಾಟೀಲ, ದೈಹಿಕ ಶಿಕ್ಷಣ ಸಂಚಾಲಕ ಪ್ರವೀಣ ಮಾನೆ ಇತರರಿದ್ದರು.