

ಭದ್ರಾವತಿ: ಇಲ್ಲಿನ ವಿಐಎಸ್‌ಎಲ್ ಕಾರ್ಖಾನೆ ಕಾರ್ಮಿಕರ ಸಂಘದ ಪದಾಧಿಕಾರಿಗಳ ನಿಯೋಗ ಬುಧವಾರ ದೆಹಲಿಗೆ ತೆರಳಿ ರಾಜ್ಯದ ಸಂಸದರಾದ ತೇಜಸ್ವಿ ಸೂರ್ಯ, ಬಿ.ಎನ್.ಬಚ್ಚೇಗೌಡ, ಅಣ್ಣಾ ಸಾಹೇಬ್ ಜೊಲ್ಲೆ, ಡಾ.ಉಮೇಶ್ ಜಾಧವ್, ಕರಡಿ ಸಂಗಣ್ಣ ಅಮರಪ್ಪ ಅವರನ್ನು ಭೇಟಿ ಮಾಡಿ ಕಾರ್ಖಾನೆಗೆ ಅವಶ್ಯವಿರುವ 300 ಕೋಟಿ ರೂ. ಬಂಡವಾಳವನ್ನು ಭಾರತೀಯ ಉಕ್ಕು ಪ್ರಾಧಿಕಾರದಿಂದ ತೊಡಗಿಸಿಕೊಡುವಂತೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಎಲ್ಲಾ ಸಂಸದರು ಲೋಕಸಭಾ ಸದಸ್ಯರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದಲ್ಲಿ ಆಗಸ್ಟ್ ಮೊದಲ ವಾರದಲ್ಲಿ ಉಕ್ಕು ಸಚಿವ ಜ್ಯೋತಿರಾಧಿತ್ಯ ಸಿಂಧ್ಯ ಅವರನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕಾರ್ಮಿಕ ಸಂಘದ ಅಧ್ಯಕ್ಷ ಜೆ.ಜಗದೀಶ್, ಬಸಂತಕುಮಾರ್. ಕೆ.ಮನು ಇತರರಿದ್ದರು.