ವಿಕಲಚೇತನ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ

ವಿಕಲಚೇತನ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ
Published on

ಹಾಸನ: ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರು ಗುರುವಾರ ಜಿಲ್ಲಾ ಕ್ರೀಡಾಂಗಣದಲ್ಲಿ ವಿಕಲಚೇತನ ಫಲಾನುಭವಿಗಳಿಗೆ ಇಂಧನ ಚಾಲಿತ ತ್ರಿಚಕ್ರ ವಾಹನಗಳು, ಬ್ಯಾಟರಿ ಚಾಲಿತ ವೀಲ್ ಚೇರ್ ಗಳು, ಬ್ರೈಲ್ ಕಿಟ್, ಟಾಕಿಂಗ್ ಲ್ಯಾಪ್ಟಾಪ್
ಹಾಗೂ ಹೊಲಿಗೆ ಯಂತ್ರವನ್ನು ವಿತರಿಸಿದರು.
ಸಂಸದ ಶ್ರೇಯಸ್ ಪಟೇಲ್, ಶಾಸಕ ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ,ಉಪ ವಿಭಾಗಾಧಿಕಾರಿ ಮಾರುತಿ ಅಂಗವಿಕಲರ ಕಲ್ಯಾಣ ಇಲಾಖೆ ಅಧಿಕಾರಿ ಅನುಪಮ ಹಾಗೂ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net