ವಿಕಲಚೇತನರಿಂದ ಅರ್ಜಿ ಆಹ್ವಾನ

Published on

ಚಾಮರಾಜನಗರ: ಕೊಳ್ಳೇಗಾಲ ನಗರಸಭೆಯ 2020-21 ಮತ್ತು 2021-22ನೇ ಸಾಲಿನ ಎಸ್.ಎಫ್.ಸಿ ಸಾಲಿನ ಶೇ.5ರ ಅನುಮೋದಿತ ಕ್ರಿಯಾ ಯೋಜನೆಯಂತೆ ಯಂತ್ರಚಾಲಿತ ಕಂಪನಿಯ ಮೂರು ಚಕ್ರದ ಸ್ಕೂಟರ್‌ಗಳನ್ನು ನೀಡಲು ನಗರಸಭಾ ವ್ಯಾಪ್ತಿಯಲ್ಲಿ ವಾಸಿಸುವ ಶೇ.75ರಷ್ಟು ಮೇಲ್ಪಟ್ಟ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ನಗರಸಭಾ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ದೃಢೀಕರಿಸಿ ಜ.30 ರೊಳಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ, ಷರತ್ತು ಮತ್ತು ನಿಬಂಧನೆಗಳನ್ನು ಸಂಬಂಧಪಟ್ಟ ಶಾಖೆಯಲ್ಲಿ ಪಡೆಯಬಹುದು ಎಂದು ಕೊಳ್ಳೇಗಾಲ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net