ವಿಚಕ್ಷಣ ದಳದಿಂದ ಸೇತುವೆ ಕಾಮಗಾರಿ ಪರಿಶೀಲನೆ

22 HUTTI 02
Published on

ಹಟ್ಟಿಚಿನ್ನದಗಣಿ: ಪಟ್ಟಣದಿಂದ ಹಟ್ಟಿ ಕ್ಯಾಂಪ್ ಸಂಪರ್ಕಿಸುವ ಸೇತುವೆ ಕಾಮಗಾರಿ ಕಳಪೆ ಮತ್ತು ಅಪೂರ್ಣವಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ವಿಚಕ್ಷಣ ದಳದಿಂದ ಶುಕ್ರವಾರ ಪರಿಶೀಲನೆ ನಡೆಸಲಾಯಿತು.

ಸುಮಾರು 4.2 ಕೋಟಿ 20 ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಸೇತುವೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಸರ್ಕಾರದ ಅನುದಾನವನ್ನು ಸೇತುವೆ ಕಾಮಗಾರಿಗೆ ಸರಿಯಾಗಿ ಬಳಕೆ ಮಾಡಿಲ್ಲ ಎಂದು ಪಟ್ಟಣದ ನಿವಾಸಿ ಯಲ್ಲಪ್ಪ ಮಾಚನೂರು, ಲೋಕೋಪಯೋಗಿ ಇಲಾಖೆಯ ಸಂಪರ್ಕ ಮತ್ತು ಕಟ್ಟಡಗಳು ವಿಭಾಗದ ಮುಖ್ಯ ಅಭಿಯಂತರಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ ವಿಚಕ್ಷಣ ದಳ ಆಕ್ಷೇಪಣೆಯಲ್ಲಿನ ಅಂಶಗಳನ್ನು ಕೂಲಂಕಶವಾಗಿ ಪರಿಶೀಲಿಸಿ ವರದಿ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net