ವಿಚಾರ ಪ್ರಸ್ತಾಪಿಸಲು ಎಲ್ಲರೂ ಸ್ವತಂತ್ರರು

satish
Published on

ಬೆಳಗಾವಿ: ಮುಖ್ಯಮಂತ್ರಿ ವಿಚಾರ ಪ್ರಸ್ತಾಪಿಸಿದ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ನೋಟಿಸ್ ನೀಡಿದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ವಿಚಾರ ಪ್ರಸ್ತಾಪಿಸಲು ಎಲ್ಲರೂ ಸ್ವತಂತ್ರರು. ಯಾರು ಬೇಕಾದರೂ ಮುಂದಿನ ಸಿಎಂ ಯಾರು ಎಂದು ಈಗಲೇ ಹೇಳುವುದು ಕಷ್ಟ ಎಂದು ಕೆಪಿಸಿಸಿ ಕಾರ್ಯಾ ಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಾವುದೇ ನಾಯಕರು ವ್ಯಕ್ತಿ ಪೂಜೆ ಮಾಡುವುದು ಬೇಡ. ಪಕ್ಷದ ಪೂಜೆ ಮಾಡಿ ಎಂದು ನಾವೂ ಕೂಡ ಹೇಳುತ್ತೇವೆ.

ಸಿದ್ದರಾಮೋತ್ಸವದಿಂದ ಕಾಂಗ್ರೆಸ್‌ಗೆ ಮತ್ತಷ್ಟು ಶಕ್ತಿ ಬರುತ್ತದೆ. ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರ ಗೆಲ್ಲುವುದೊಂದೇ ನಮ್ಮ ಗುರಿಯಲ್ಲ. ಪಕ್ಷ ಸಂಘಟನೆ ದೃಷ್ಟಿಯಿಂದ ರಾಯಬಾಗ, ಸವದತ್ತಿ ಸೇರಿ ಜಿಲ್ಲೆಯಲ್ಲಿ ಸಭೆ ನಡೆಸುತ್ತಿದ್ದೇವೆ. ಅಭ್ಯರ್ಥಿ ಬಗ್ಗೆ ಚಿಂತಿಸುವುದಿಲ್ಲ. ಮೊದಲು ಪಕ್ಷ ಸಂಘಟಣೆ, ಮತ ಬ್ಯಾಂಕ್ ಗಟ್ಟಿಗೊಳಿಸಲು ಪ್ರಯತ್ನಿಸುತ್ತೇವೆ ಎಂದರು.

ಕೇಂದ್ರ, ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡುತ್ತೇವೆ ಎಂದರು. ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರ ಬದಲಾವಣೆ ಚರ್ಚೆ ಕುರಿತು ಪ್ರತಿಕ್ರಿಯಿಸಿದ ಅವರು, ಯಾವುದೇ ಘಟಕದ ಅಧ್ಯಕ್ಷರ ಬದಲಾವಣೆ ಸದ್ಯಕ್ಕಿಲ್ಲ ಎಂದು ಉತ್ತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net