ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ

21_hsn_02
Published on

ಹಾಸನ: ಬಿಜೆಪಿ ವತಿಯಿಂದ ರಾಜ್ಯಾದ್ಯಂತ ವಿಜಯ ಸಂಕಲ್ಪ ಅಭಿಯಾನಯನ್ನು ಜ.21ರಿಂದ ಜ.29ರ ತನಕ ಹಮ್ಮಿಕೊಳ್ಳಲಾಗಿದ್ದು, ನಗರದ ಚನ್ನಪಟ್ಟಣ 35ನೇ ವಾರ್ಡ್‌ನಲ್ಲಿ ಶನಿವಾರ ಅಭಿಯಾನಕ್ಕೆ ಶಾಸಕ ಪ್ರೀತಂ ಗೌಡ ಚಾಲನೆ ನೀಡಿದರು.


ವಿಜಯ ಸಂಕಲ್ಪ ಅಭಿಯಾನದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು, ಜನಪ್ರತಿನಿಧಿಗಳು ಮನೆ ಮನೆಗೆ ತೆರಳಿ ರಾಜ್ಯ ಸರ್ಕಾರ ಮಾಡಿರುವ ಅಭಿವೃದ್ಧಿ ಯೋಜನೆಗಳ ಮಾಹಿತಿಯ ಕರಪತ್ರ ಹಂಚಬೇಕು. ಮನೆಗಳಿಗೆ ಸ್ಟಿಕರ್ ಅಂಟಿಸಬೇಕು ಹಾಗೂ ಸದಸ್ಯತ್ವ ನೋಂದಣಿಗೆ ಮಿಸ್ಡ್ ಕಾಲ್ ನೀಡಬೇಕೆಂದು ತಿಳಿಸಿದರು.


ಇದಕ್ಕೂ ಮೊದಲು ಚನ್ನಪಟ್ಟಣ ಬಡಾವಣೆಯ ಮನೆ ಮನೆಗೆ ತೆರಳಿ ಕರಪತ್ರ ಹಂಚಿ ಸ್ಟಿಕ್ಕರ್ ಅಂಟಿಸಿದರು.
ನಗರಸಭಾ ಅಧ್ಯಕ್ಷ ಆರ್.ಮೋಹನ್, ನಗರ ಬಿಜೆಪಿ ಅಧ್ಯಕ್ಷ ವೇಣುಗೋಪಾಲ್, ಗ್ರಾಮಾಂತರ ಅಧ್ಯಕ್ಷ ರಂಗನಾಥ್, ಶಕ್ತಿಕೇಂದ್ರದ ಅಧ್ಯಕ್ಷ ಮೋಹನ್, ಭಾಸ್ಕರ್, ಹರೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net