ವಿಜಯ ಸಂಕಲ್ಪ ಯಾತ್ರಗೆ ಕೋಟೆನಗರಿ ಸಜ್ಜು..!

bkt-13-6 a
ಬಾಗಲಕೋಟೆ ನಗರದ ಬಿವಿವಿ ಸಂಘದ ಮಿನಿ ಸಭಾಭವನದಲ್ಲಿ ಶಾಸಕ ವೀರಣ್ಣ ಚರಂತಿಮಠ ಬಾಗಲಕೋಟೆ ಮತಕ್ಷೇತ್ರದ ಬಿಜೆಪಿ ಪ್ರಣಾಳಿಕೆಗೆ ಕ್ಯೂಆರ್‌ಕೋಡ್ ಸ್ಕ್ಯಾನ್ ಬಿಡುಗಡೆಗೊಳಿಸಿದರು.
Published on

ಬಾಗಲಕೋಟೆ: ವಿಧಾನಸಭೆ ಚುಣಾವಣೆ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದಿಂದ ರಾಜ್ಯವ್ಯಾಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ರಥಯಾತ್ರೆ ಜಿಲ್ಲೆಗೆ ಪ್ರವೇಶ ಮಾಡಿದ್ದು, ಮಂಗಳವಾರ ಜಿಲ್ಲಾ ಕೇಂದ್ರ ಸ್ಥಾನ ಬಾಗಲಕೋಟೆ ಪ್ರವೇಶ ಮಾಡಲಿದೆ. ಇದಕ್ಕಾಗಿ ಕೋಟೆನಗರಿ ಕೇಸರಿಮಯಗೊಂಡಿದೆ.

ಇನ್ನು ಸೋಮವಾರ ಬಿವಿವಿ ಸಂಘದ ಹಳೇ ಮೈದಾನದಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು, ಅಭಿಮಾನಿಗಳು ಬಾಗಲಕೋಟೆಯಲ್ಲಿ ನಡೆಯುವ ವಿಜಯ ಸಂಕಲ್ಪ ರಥಯಾತ್ರೆ ಯಶಸ್ವಿಗೊಳಿಸಬೇಕು. ಸಂಜೆ ೫ ಗಂಟೆಗೆ ಬಿಟಿಡಿಎ ಸಮೀಪ ಯಾತ್ರಗೆ ಅದ್ಧೂರಿ ಸ್ವಾಗತ ಕೋರಲಾಗುವುದು ಅಲ್ಲಿಂದ ಬೈಕ್ ರ‍್ಯಾಲಿ ಮೂಲಕ ವಿದ್ಯಾಗಿರಿ ಇಂಜಿನಿಯರಿಂಗ್ ಕಾಲೇಜು ವೃತ್ತ, ವೇಂಕಟ ಪೇಟೆ, ವಲ್ಲಬಾಯಿ ಚೌಕ್, ಎಂ.ಜಿ ರೋಡ ಮುಖಾಂತರ ಬಸವೇಶ್ವರ ವೃತ್ತ, ಕಾಲೇಜು ಮೂಲಕ ಬಿವಿವಿ ಸಂಘದ ಮೈದಾನ ತಲುಪಲಿದೆ ಎಂದರು.

ನಂತರ ಸಾರ್ವಜನಿಕ ಸಮಾವೇಶದಲ್ಲಿ ಕೇಂದ್ರದ ರಕ್ಷಣಾ ಖಾತೆಯ ರಾಜ್ಯ ಸಚಿವ ವಿ.ಕೆ.ಸಿಂಗ್, ಬಿಜೆಪಿ ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ, ಜಿಲ್ಲೆಯ ಸಚಿವರಾದ ಗೋವಿಂದ ಕಾರಜೋಳ, ಮುರಗೇಶ ನಿರಾಣಿ, ಸಂಸದ ಪಿ.ಸಿ.ಗದ್ದಿಗೌಡರ ಸೇರಿದಂತೆ ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಆಗಮಿಸಲಿದ್ದಾರೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿ.ಪ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ಬುಡಾ ಅಧ್ಯಕ್ಷ ಬಸಲಿಂಗಪ್ಪ ನಾವಲಗಿ, ಬಿಟಿಡಿಎ ಮಾಜಿ ಅಧ್ಯಕ್ಷರಾದ ಜಿ.ಎನ್ ಪಾಟೀಲ, ಸಿ.ವಿ.ಕೋಟಿ. ಬೆಳಗಾವಿ ಪ್ರಭಾರಿ ಬಸವರಾಜ ಯಂಕಂಚಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ನಗರಸಭೆ ಉಪಾಧ್ಯಕ್ಷ ಬಸವರಾಜ ಅವರಾದಿ, ಗ್ರಾಮೀಣ ಮಂಡಲ ಅಧ್ಯಕ್ಷ ಸುರೇಶ ಕೋಣ್ಣುರ, ನಗರಮಂಡಲ ಅಧ್ಯಕ್ಷ ಸದಾನಂದ ನಾರಾ, ಜಿಲ್ಲಾ ಮಾದ್ಯಮ ವಕ್ತಾರ ಹೇಮಾದ್ರಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net