ವಿಜಯಕುಮಾರ್, ಸುನೀತಾ ಅವಿರೋಧ ಆಯ್ಕೆ

11.Pyp.01
ಪಿರಿಯಾಪಟ್ಟಣ ಟಿಎಪಿಸಿಎಂಎಸ್‌ನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ವಿಜಯಕುಮಾರ್ ಮತ್ತು ಸುನೀತಾ ಮಂಜುನಾಥ್ ಅವರನ್ನು ಸದಸ್ಯರು ಅಭಿನಂದಿಸಿದರು.
Published on

ಪಿರಿಯಾಪಟ್ಟಣ: ಇಲ್ಲಿನ ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ವಿಜಯಕುಮಾರ್ ಮತ್ತು ಉಪಾಧ್ಯಕ್ಷರಾಗಿ ಸುನೀತಾ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾದರು.

ಈ ಹಿಂದೆ ಅಧ್ಯಕ್ಷರಾಗಿದ್ದ ಡಿ.ಎ.ನಾಗೇಂದ್ರ ಮತ್ತು ಉಪಾಧ್ಯಕ್ಷರಾಗಿದ್ದ ಪಿ.ವಿ.ಜಲೇಂದ್ರ ಅವರು ಆಂತರಿಕ ಒಪ್ಪಂದದಂತೆ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಶುಕ್ರವಾರ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಕುರಿತಂತೆ ಚುನಾವಣಾ ಪ್ರಕ್ರಿಯೆ ನಡೆಯಿತು. ಇವರಿಬ್ಬರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದಿದ್ದರಿಂದ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಲಾಯಿತು.

ಮಾಜಿ ಅಧ್ಯಕ್ಷರಾದ ತಿಮ್ಮೇಗೌಡ, ಡಿ.ಎ.ನಾಗೇಂದ್ರ, ನಿರ್ದೇಶಕರಾದ ಎಸ್.ರಾಮು, ಜಲೇಂದ್ರ, ತಿಮ್ಮನಾಯ್ಕ, ಕುಮಾರ, ಸಿ.ಎನ್.ರವಿ, ಜವರಪ್ಪ, ಸರ್ವಮಂಗಳಾ, ಕಾರ್ಯದರ್ಶಿ ಕಲಾವತಿ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net