ವಿಜಯಪುರದಲ್ಲಿ ಪೊಲೀಸರು-ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ

IMG-20201208-WA0028
Published on

ವಿಜಯಪುರ: ಭಾರತ ಬಂದ್ ಹಿನ್ನೆಲೆ ಬೈಕ್ ಜಾಥಾಕ್ಕೆ ಮುಂದಾಗಿದ್ದ ಎಐಕೆಎಸ್ ಸಿ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಮಂಗಳವಾರ ಬೆಳಗ್ಗೆ ಇಲ್ಲಿನ ಕೇಂದ್ರ ಬಸ್ ನಿಲ್ದಾಣ ಬಳಿ ಜಮಾಯಿಸಿದ ಕಾರ್ಯಕರ್ತರು ಸರ್ಕಾರದ ವಿರುದ್ದ ಘೋಷಣೆ ಕೂಗಿದರು. ಪ್ರತಿಭಟನೆ ನಡೆಸಿ ಬಳಿಕ ಬೈಕ್ ಜಾಥಾಕ್ಕೆ ಮುಂದಾದರು.

ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ತಡೆಯಲಾಗಿ ಪರಸ್ಪರ ಮಾತಿನ ಚಕಮಕಿ ನಡೆಯಿತು. ಯಾವುದೇ ಕಾರಣಕ್ಕೂ ಜಾಥಾ ನಿಲ್ಲುವುದಿಲ್ಲ....ಮಾಡಿಯೇ ತೀರುತ್ತೇವೆಂದು ಕಾರ್ಯಕರ್ತರು ಪಟ್ಟು ಹಿಡಿದರು. ಡಿವೈಎಸ್ ಪಿ ಕೆ.ಸಿ. ಲಕ್ಷ್ಮಿನಾರಾಯಣ ಸ್ಥಳಕ್ಕೆ ಆಗಮಿಸಿ ಬೈಕ್ ಜಾಥಾಗೆ ಅವಕಾಶ ಇಲ್ಲವೆಂದು ಖಡಕ್ ಎಚ್ಚರಿಕೆ ನೀಡಿದರು. ಇದರಿಂದ ಜಗ್ಗದ ಕಾರ್ಯಕರ್ತರು ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ಗಿಳಿದರು.

ಬಂದ್ ಹಿನ್ನೆಲೆ ಅಲ್ಲಲ್ಲಿ ಪ್ರತಿಭಟನೆ ನಡೆದಿದ್ದು ಬಿಟ್ಟರೆ ಬಹುತೇಕ ಯಾವುದೇ ಪರಿಣಾಮ ಬೀರಿಲ್ಲ. ಬಸ್, ಆಟೋಗಳು ಎಂದಿನಂತೆ ರಸ್ತೆಗಿಳಿದವು. ಹೋಟೆಲ್ ಅಂಗಡಿ ಮುಂಗಟ್ಟುಗಳು ಎಂದಿನಂತೆ ತೆರೆದಿದ್ದು ಕೆಲವರು ಮಾತ್ರ ಸ್ವಯಂ ಪ್ರೇರಿತವಾಗಿ ಬಂದ್ ಗೆ ಬೆಂಬಲ ‌ನೀಡಿದ್ದು ಕಂಡು ಬಂತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net