ವಿಜಯಪುರದಲ್ಲಿ ಮಹಾಮಾರಿಗೆ ಮೊತ್ತೊಂದು ಬಲಿ !

carona
Published on

ವಿಜಯಪುರ: ಮಹಾಮಾರಿ ಕರೊನಾ ಅಟ್ಟಹಾಸ ದಿನೇ ದಿನೇ ಹೆಚ್ಚುತ್ತಿದ್ದು ಜಿಲ್ಲೆಯಲ್ಲಿ ಮತ್ತೊಂದು ಸಾವು ಸಂಭವಿಸುವ ಮೂಲಕ ಈವರೆಗಿನ ಮೃತರ ಸಂಖ್ಯೆ 208ಕ್ಕೆ ಏರಿಕೆಯಾಗಿದೆ.

ಸೋಮವಾರ 27 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಕಳೆದೊಂದು ತಿಂಗಳಿನಿಂದ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಈವರೆಗೆ ಜಿಲ್ಲೆಯಲ್ಲಿ 15160 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಸೋಮವಾರ 25 ಜನ ಗುಣಮುಖರಾಗಿದ್ದಾರೆ. 718 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. 20 ಜನರ ಗಂಟಲು ದ್ರವ ಮಾದರಿ ಪರೀಕ್ಷಿಸಲಾಗಿದೆ. ಇನ್ನೂ 698 ಜನರ ವರದಿ ಬರಬೇಕಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net