

ಬೀದರ್: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕೊಡಮಾಡುವ ಕಿತ್ತೂರ ರಾಣಿ ಚನ್ನಮ್ಮ ಪ್ರಶಸ್ತಿಗೆ ಇಲ್ಲಿಯ ಲೇಖಕಿ, ಸಾಹಿತಿ ವಿಜಯಲಕ್ಷ್ಮೀ ಶಿವಕುಮಾರ ಕೌಟಗೆ ಭಾಜನರಾಗಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇತ್ತೀಚೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಏರ್ಪಡಿಸಿದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರು ಕೌಟಗೆ ಅವರಿಗೆ ಪ್ರಶಸ್ತಿ ಪತ್ರ, 25 ಸಾವಿರ ರೂ. ಚೆಕ್ ನೀಡಿ ಗೌರವಿಸಿದರು. ಸಾಹಿತ್ಯ ಕ್ಷೇತ್ರದ ಸೇವೆ ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.
ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು, ಶ್ರೀ ಗುರುಬಸವ ಪಟ್ಟದ್ದೇವರು ಸೇರಿದಂತೆ ಹಲವು ಗಣ್ಯರು ಇದ್ದರು. ವಿಜಯಲಕ್ಷ್ಮೀ ಕೌಟಗೆ ಅವರು ಭಾರತದ ಮಹಿಳಾ ಮುಖ್ಯಮಂತ್ರಿಗಳು ಸೇರಿದಂತೆ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.