

ಚಿತ್ರದುರ್ಗ: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರು ಆಯ್ಕೆ ಆಗಿರುವುದು ತುಂಬಾ ಸಂತೋಷದ ಸಂಗತಿ. ಪಕ್ಷದ ಸರ್ವರೂ ಇಷ್ಟಪಡುವ, ಎಲ್ಲಾ ಸಮುದಾಯದವರು ಬೆಂಬಲಿಸುವ ನಾಯಕರಾಗಿ ಹೊರಹೊಮ್ಮಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಇನ್ನಷ್ಟು ಬಲಿಷ್ಠವಾಗಿ ಬೆಳೆಯಲು ಸಹಕಾರಿಯಾಗಲಿದೆ ಎಂದು ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ತಿಳಿಸಿದ್ದಾರೆ.
ಪಕ್ಷಕ್ಕೆ ಹೊಸ ಭರವಸೆ ಮೂಡಿದ್ದು, ಅವರ ತಂದೆ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಂತೆ ಅತ್ಯಂತ ಕ್ರಿಯಾಶೀಲವಾಗಿ, ಸಂಘಟನಾ ಚತುರರಾಗಿ ಜನರನ್ನು ಆಕರ್ಷಿಸುವ ಶಕ್ತಿ ಹೊಂದಿದ್ದಾರೆ. ಇವರನ್ನು ಆಯ್ಕೆ ಮಾಡಿದ ಪ್ರಧಾನಿ ನರೇಂದ್ರಮೋದಿ, ಕೇಂದ್ರದ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ತೀರ್ಮಾನ ಸ್ವಾಗತಾರ್ಹ. ಮುಂಬರುವ ದಿನದಲ್ಲಿ ನೂತನ ಅಧ್ಯಕ್ಷರನ್ನು ಅದ್ದೂರಿಯಾಗಿ ಜಿಲ್ಲೆಗೆ ಬರಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.