ವಿಜೃಂಭಣೆಯ ಕರಿಯಮ್ಮ, ಮಲ್ಲಿಗೆಮ್ಮ ರಥೋತ್ಸವ

27arsph2ep
ಕರಿಯಮ್ಮ, ಮಲ್ಲಿಗೆಮ್ಮ ದೇವಿಯರ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.
Published on

ಅರಸೀಕೆರೆ: ಗ್ರಾಮ ದೇವತೆಗಳಾದ ಕರಿಯಮ್ಮ, ಮಲ್ಲಿಗೆಮ್ಮ ದೇವಿಯರ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಗುರುವಾರ ವಿಜೃಂಭಣೆಯಿಂದ ನೆರವೇರಿತು.

ಸಂಪ್ರದಾಯದಂತೆ ಮೂಲ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಮುಂಜಾಯಿಂದಲೇ ದೇಗುಲಕ್ಕೆ ಆಗಮಿಸಿದ್ದ ಭಕ್ತರು ದೇವಿಗೆ ಪೂಜೆ ಸಲ್ಲಿಸಿ ದರ್ಶನ ಪಡೆದರು. ಉಭಯ ದೇವಿಯರ ಉತ್ಸವ ಮೂರ್ತಿಯನ್ನು ಪುಷ್ಪಾಲಂಕೃತ ಮಂಟಪದಲ್ಲಿ ಪ್ರತಿಷ್ಠಾಪಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ಭಕ್ತರು ಹಣ್ಣು ದವನ ಎಸೆದು ಭಕ್ತಿ ಸಮರ್ಪಿಸಿದರು. ದೇವಾಲಯ ಟ್ರಸ್ಟ್‌ನ ಸದಸ್ಯರು, ನಗರದ ವಿವಿಧ ಬಡಾವಣೆಗಳ ನಿವಾಸಿಗಳು, ಗಣ್ಯರು, ಸಂಘ,ಸಂಸ್ಥೆಗಳ ಮುಖಂಡರು ರಥೋತ್ಸವಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net