ವಿಜೃಂಭಣೆಯಿಂದ ಸ್ವಾತಂತ್ರೊೃೀತ್ಸವ ಆಚರಿಸೋಣ

ctd 9 DC--02
Published on

ಚಿತ್ರದುರ್ಗ: ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಆ.15ರ ಬೆಳಗ್ಗೆ 9ಕ್ಕೆ ವಿಜೃಂಭಣೆಯಿಂದ ಸ್ವಾತಂತ್ರೊೃೀತ್ಸವ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಡಿಸಿ ದಿವ್ಯಾಪ್ರಭು ಸೂಚಿಸಿದರು.
ಸೋಮವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. ಶಿಷ್ಟಾಚಾರದಂತೆ ಗಣ್ಯರು, ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಗೈರಾಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, 14ರಂದೇ ಆಯಾ ಶಾಲೆಗಳಿಗೆ ಸಿಹಿ ತಲುಪಿಸಬೇಕು. ನಗರದ ಪ್ರಮುಖ ವೃತ್ತಗಳು, ಸರ್ಕಾರಿ ಕಟ್ಟಡಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಬೇಕು ಎಂದು ಸೂಚಿಸಿದರು.
ಹೆಚ್ಚುವರಿ ಎಸ್‌ಪಿ ಕುಮಾರಸ್ವಾಮಿ, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್, ಡಿಡಿಪಿಐ ರವಿಶಂಕರ್ ರೆಡ್ಡಿ, ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಆನಂದ್, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಅಧಿಕಾರಿ ಗಣೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net