

ಚಾಮರಾಜನಗರ: ತಾಲೂಕಿನ ಹರದನಹಳ್ಳಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ 2025-26ನೇ ಶೈಕ್ಷಣಿಕ ಸಾಲಿಗೆ ಅಥವಾ ಕಾಯಂ ಸಿಬ್ಬಂದಿ ನೇಮಕವಾಗುವವರೆಗೆ ತಾತ್ಕಾಲಿಕವಾಗಿ ವಿಜ್ಞಾನ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಪದವಿಯೊಂದಿಗೆ ಬಿ.ಇಡಿ ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತ ಅರ್ಹ ಅಭ್ಯರ್ಥಿಗಳು ಹರದನಹಳ್ಳಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ ಅ.6ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.