

ಹಲಗೂರು: ವಿದ್ಯಾರ್ಥಿಗಳಲ್ಲಿ ವಿಜ್ಞಾನ ವಿಷಯ ಕ್ಷಣ ಕ್ಷಣವೂ ಕುತೂಹಲ ಮೂಡಿಸುತ್ತದೆ. ಆಸಕ್ತಿಯಿಂದ ವಿಜ್ಞಾನ ಕಲಿತು ಭಾರತ ದೇಶಕ್ಕೆ ಕೀರ್ತಿ ತರುವ ಭವಿಷ್ಯದ ವಿಜ್ಞಾನಿಗಳಾಗಿ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ಎ.ಬಿ.ಬಸವರಾಜು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಸಮೀಪದ ಯತ್ತಂಬಾಡಿ ಸರ್ಕಾರಿ ಪ್ರೌಢಶಾಲೆ ಅವರಣದಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ವತಿಯಿಂದ 12 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ‘ವಿಜ್ಞಾನ ಉಪವನ ಕೇಂದ್ರ’ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ಹಿಂದೆ ನಗರ, ಪಟ್ಟಣ ಪ್ರದೇಶಗಳಲ್ಲಿ ಮಾತ್ರ ಡಿಜಿಟಲ್ ಸೌಲಭ್ಯ ಸಿಗುತ್ತಿತ್ತು. ಪ್ರಸ್ತುತ ದಿನಗಳಲ್ಲಿ ಪ್ರತಿ ಹಳ್ಳಿಗಳಲ್ಲಿಯೂ ವಿಜ್ಞಾನ- ತಂತ್ರಜ್ಞಾನ ಕೆಲಸ ಮಾಡುತ್ತಿದೆ. ಅಂಗೈಯಲ್ಲಿ ಪ್ರಪಂಚದ ವಿಚಾರಗಳನ್ನು ಅರಿಯಬಹುದಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಸದ್ಬಳಕೆ ಮಾಡಿಕೊಂಡು ಸಾಧನೆ ಮಾಡುವಂತೆ ಕಿವಿಮಾತು ಹೇಳಿದರು.
ಮಂಡ್ಯ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜವರೇಗೌಡ ಮಾತನಾಡಿದರು. ಎಂ.ಡಿ.ಸಿ.ಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಯತ್ತಂಬಾಡಿ ಪುಟ್ಟರಾಮು, ಗ್ರಾಪಂ ಅಧ್ಯಕ್ಷೆ ಶಿವಮ್ಮ, ಮುಖ್ಯಶಿಕ್ಷಕ ಶಿವಾನಂದ, ಎಸ್‌ಡಿಎಂಸಿ ಅಧ್ಯಕ್ಷ ಕೆಂಪರಾಜು, ಶಿಕ್ಷಣ ಸಂಯೋಜಕ ರವಿಕುಮಾರ್, ನಿಂಗರಾಜು, ಸಂತೋಷ್‌ಕುಮಾರ್, ಹರೀಶ್‌ಕುಮಾರ್, ಗ್ರಾಪಂ ಸದಸ್ಯ ಅಶೋಕ್, ಪ್ರಕಾಶ್, ಗ್ರಾಮದ ಮುಖಂಡರಾದ ಪುಟ್ಟಸ್ವಾಮಿಗೌಡ, ಡಿ.ಜಯರಾಮು, ವೆಂಕಟೇಶ್, ಕೆಂಪರಾಜು ಹಲವರು ಇದ್ದರು.