ವಿಜ್ಞಾನ ವಸ್ತು ಪ್ರದರ್ಶನ, ಕಲಾ ಉತ್ಸವ 28ರಂದು

6060
Published on

ಅಥಣಿ: ಜಾಧವಜಿ ಶಿಕ್ಷಣ ಸಂಸ್ಥೆಯ ಜೆಎ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಆಶ್ರಯದಲ್ಲಿ ತಾಲೂಕಿನ ಪ್ರೌಢಶಾಲೆಯ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸಲು ವಿಜ್ಞಾನ ವಸ್ತು ಪ್ರದರ್ಶನ, ಕಲಾ ಉತ್ಸವ ಮತ್ತು ಆಹಾರ ಮೇಳ ಕಾರ್ಯಕ್ರಮವನ್ನು ಡಿ.28, 29ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ.ರಾಮ ಕುಲಕರ್ಣಿ ಹೇಳಿದರು.

ಇಲ್ಲಿನ ಜೆಎ ಶಿಕ್ಷಣ ಸಂಸ್ಥೆಯಿಂದ ವಿಜ್ಞಾನ ವಸ್ತುಪ್ರದರ್ಶನ ಮತ್ತು ಕಲಾ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಶುಕ್ರವಾರ ಬಿಡುಗಡೆಗೊಳಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮಹತ್ವ ಮತ್ತು ಉಪಯೋಗವನ್ನು ಪ್ರಾಯೋಗಿಕವಾಗಿ ತಿಳಿಸಲು ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಹಾಗೂ ಕಲಾ ಉತ್ಸವವನ್ನು ಆಯೋಜಿಸಿದ್ದೇವೆ. ತಾಲೂಕಿನ 100ಕ್ಕೂ ಹೆಚ್ಚು ಶಾಲೆ ಮಕ್ಕಳು ಭಾಗವಹಿಸಲಿದ್ದಾರೆ ಎಂದರು.

ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಂದೀಪ ಸಂಗೊರಾಮ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ವಿಜ್ಞಾನ ಮೇಳ ಹಮ್ಮಿಕೊಂಡಿದ್ದೇವೆ. ಡಿ.28ರಂದು ಬೆಳಗ್ಗೆ 9ಗಂಟೆಗೆ ವಿಜ್ಞಾನ ವಸ್ತು ಪ್ರದರ್ಶನ, ಕಲಾ ಉತ್ಸವ ಮತ್ತು ಆಹಾರ ಮೇಳವನ್ನು ಕೊಪ್ಪಳದ ರವೀಂದ್ರನಾಥ ಗುಮಾಸ್ತೆ ಉದ್ಘಾಟಿಸುವರು. ಡಾ.ರಾಮ ಕುಲಕರ್ಣಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪಿ.ಐ.ಭಂಡಾರೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net