ವಿಜ್ಞಾನ ಶಿಕ್ಷರ ಮಾರ್ಗದರ್ಶನ ಅವಶ್ಯ

bkt-18-7
ಗದ್ದನಕೇರಿಯ ಮಳಿಯಪ್ಪ ಸ್ವಾಮಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಮಾರ್ಗದರ್ಶಿ ಶಿಕ್ಷಕರ ತರಬೇತಿ ಕಾರ್ಯಾಗಾರದಲ್ಲಿ ಮಳಿಯಪ್ಪ ಸ್ವಾಮಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಲರಾಮ್ ನಾಯಕ ಉದ್ಘಾಟಿಸಿದರು. ಜಿಲ್ಲಾ ಶಿಕ್ಷಣಾಧಿಕಾರಿ ಎಂ.ಜಿ.ಬೆಳ್ಳೆಣ್ಣವರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ ಎಚ್.ಜಿ.ಹುದ್ದಾರ, ಕ್ಷೇತ್ರ ಶಿಕ್ಷಣಾಧಿಕಾರಿ ಸಾವಿತ್ರಿ ಕೊಂಡಗೋಳಿ ಸಂಪನ್ಮೂಲ ವ್ಯಕ್ತಿಗಳಾದ ಎಸ್.ಎಸ್.ಬಳ್ಳೂರಗಿ, ಅರುಣ ಶಂಭೋಜಿ, ಜಿಲ್ಲಾ ಸಂಚಾಲಕ ಶ್ರೀನಿವಾಸ್ ಬೆನಕಟ್ಟಿ ಇದ್ದರು.
Published on

ಬಾಗಲಕೋಟೆ: ವಿಜ್ಞಾನ ಶಿಕ್ಷಕರ ಮಾರ್ಗದರ್ಶನ ಇಂದಿನ ವೈಜ್ಞಾನಿಕ ಲೋಕಕ್ಕೆ ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಎಂ.ಜಿ.ಬೆಳ್ಳೆಣ್ಣವರ ಹೇಳಿದರು.


ಗದ್ದನಕೇರಿಯ ಮಳಿಯಪ್ಪ ಸ್ವಾಮಿ ಪ್ರೌಢಶಾಲೆಯಲ್ಲಿ ರಾಜ್ಯ ವಿಜ್ಞಾನ ಪರಿಷತ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಾಲಾ ಶಿಕ್ಷಣ, ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಮಾರ್ಗದರ್ಶಿ ಶಿಕ್ಷಕರ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.


ವಿಜ್ಞಾನ ಶಿಕ್ಷಕರು ಅಚ್ಚುಕಟ್ಟುತನದಿಂದ ಬಾಲ ವಿಜ್ಞಾನಿಗಳಿಗೆ ಮಾರ್ಗದರ್ಶನ ಮಾಡಿ ಸೂಕ್ತ ಯೋಜನೆಗಳನ್ನು ತರಲು ತಾವೆಲ್ಲರೂ ಶ್ರಮಿಸಬೇಕು ಎಂದರು.
ಡಿ.ವೈ.ಪಿ.ಸಿ ಉಪ ಸಮನ್ವಯಾಧಿಕಾರಿ ಜಾಸ್ಮಿನ್ ಕಿಲ್ಲೆದಾರ್ ಮಾತನಾಡಿ, ಮಕ್ಕಳ ಸುತ್ತಮುತ್ತಲಿನ ಪರಿಸರದಲ್ಲಿರುವ ಅನೇಕ ಜ್ವಲಂತ ಸಮಸ್ಯೆಗಳನ್ನು ಗುರುತಿಸಿ ಅವುಗಳಿಗೆ ಪರಿಹಾರೋಪಾಯಗಳನ್ನು ಕಂಡುಹಿಡಿಯಲು ಇಂತಹ ತರಬೇತಿ ಕಾರ್ಯಕ್ರಮಗಳು ಶಿಕ್ಷಕರಿಗೆ ಮತ್ತು ಮಕ್ಕಳಿಗೆ ಅನುಕೂಲಕರವಾಗಿವೆ ಎಂದು ಹೇಳಿದರು.


ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ ಎಚ್.ಜಿ.ಹುದ್ದಾರ ಮಾತನಾಡಿ, ರಾಜ್ಯಮಟ್ಟ ಮತ್ತು ರಾಷ್ಟ್ರಮಟ್ಟದಲ್ಲಿ ಬಾಲ ವಿಜ್ಞಾನಿಗಳನ್ನು ಕಳುಹಿಸುವಲ್ಲಿ ಬಾಗಲಕೋಟೆ ಜಿಲ್ಲೆ ಮುಂದಿದೆ. ೩೦ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಹೆಚ್ಚಿನ ಯೋಜನೆಗಳು ಬರಬೇಕೆಂದು ಎಲ್ಲ ಶಿಕ್ಷಕರಿಗೆ ಕರೆ ನೀಡಿದರು.


ಬಾಗಲಕೋಟೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸಾವಿತ್ರಿ ಕೊಂಡಗೋಳಿ ಮಾತನಾಡಿ, ನಮ್ಮ ಅವಽಯಲ್ಲಿಯೂ ಕೂಡ ಶಿಕ್ಷಕಿಯಾಗಿ ಎರಡು ಸಾರಿ ರಾಷ್ಟ್ರಮಟ್ಟಕ್ಕೆ ವಿದ್ಯಾರ್ಥಿಗಳನ್ನು ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಲು ಕರೆದುಕೊಂಡು ಹೋಗಿರುವುದನ್ನು ನೆನಪಿಸಿದರು. ವಿಜ್ಞಾನ ಶಿಕ್ಷಕರು ಯೋಜಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಜಿಲ್ಲೆಯಿಂದ ಹೆಚ್ಚಿನ ಮಾದರಿಗಳು ಮತ್ತು ಯೋಜನೆಗಳು ರಾಷ್ಟ್ರಮಟ್ಟದಲ್ಲಿ ಮಿಂಚುವಂತಾಗಲಿ ಎಂದರು.


ಅಧ್ಯಕ್ಷತೆ ವಹಿಸಿದ್ದ ಬಲರಾಮ್ ನಾಯಕ್ ಮಾತನಾಡಿ, ಗುರುಗಳ ಉಪಸ್ಥಿತಿಯಲ್ಲಿ ತರಬೇತಿಗಳು ನಡೆದರೆ ಮಕ್ಕಳ ಭವಿಷ್ಯ ಉಜ್ವಲವಾಗಲಿದೆ. ಮಕ್ಕಳ ಕಲಿಕೆಯಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ. ಪ್ರತಿಯೊಂದು ಮಗುವಿನ ಹಿಂದೆ ಗುರುವಿನ ಪರಿಶ್ರಮ ಇದ್ದೇ ಇರುತ್ತದೆ. ವಿಜ್ಞಾನ ಶಿಕ್ಷಕರು ವಿಶೇಷ ಜ್ಞಾನ ಉಳ್ಳವರಾಗಿದ್ದು, ಮಕ್ಕಳನ್ನು ತಯಾರು ಮಾಡುವಲ್ಲಿ ಪರಿಶ್ರಮ ವಹಿಸಬೇಕು ಎಂದು ಹೇಳಿದರು.


ಸಂಪನ್ಮೂಲ ವ್ಯಕ್ತಿಗಳಾದ ಎಸ್.ಎಸ್.ಬಳ್ಳೂರಗಿ, ಅರುಣ ಶಂಭೋಜಿ, ಜಿಲ್ಲಾ ಸಂಚಾಲಕ ಶ್ರೀನಿವಾಸ್ ಬೆನಕಟ್ಟಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಶೆಟ್ಟರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಗುಜ್ಜರ್ ಉಪಸ್ಥಿತರಿದ್ದರು. ಸಂಜಯ ನಡುವಿನಮನಿ ನಿರೂಪಿಸಿದರು ಬಿ.ಟಿ.ಹಳ್ಳಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net