ವಿಜ್ಞಾನದ ಬಗ್ಗೆ ಅರಿವು ಮೂಡಿಸುವುದೇ ವಿಜ್ಞಾನ ದಿನದ ಉದ್ದೇಶ ಡಾ.ವಿಶಾಕಾ ಹಳಲಿ ಅಭಿಮತ

12Anand9
Published on

ವಿಜ್ಞಾನದ ಬಗ್ಗೆ ಅರಿವು ಮೂಡಿಸುವುದೇ ವಿಜ್ಞಾನ ದಿನದ ಉದ್ದೇಶ

ಡಾ.ವಿಶಾಕಾ ಹಳಲಿ ಅಭಿಮತ

ವಿಜಯವಾಣಿ ಸುದ್ದಿಜಾಲ ಬೆಳಗಾವಿ

ವಿಜ್ಞಾನ ಮತ್ತು ಅದರ ಪ್ರಾಮುಖ್ಯತೆ ಪ್ರತಿಯೊಬ್ಬರಿಗೂ ತಿಳಿದಿರಬೇಕು. ಜನಸಾಮನ್ಯರಲ್ಲಿ ವಿಜ್ಞಾನದ ಬಗ್ಗೆ ಅರಿವು ಮೂಡಿಸುವುದೇ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ ಮಾಡುವುದು ಮೂಲ ಉದ್ದೇಶವಾಗಿದೆ ಎಂದು ನವದೆಹಲಿಯ ರಬ್ಬರ್, ರಾಸಾಯನಿಕ ಮತ್ತು ಪಾಲಿಮರ್ ಕೌಶಲ್ಯ ಅಭಿವೃದ್ಧಿ ಮಂಡಳಿಯ ಹಿರಿಯ ವ್ಯವಸ್ಥಾಪಕಿ ಡಾ. ವಿಶಾಕಾ ಹಳಲಿ ಹೇಳಿದರು.

ನಗರದ ಕೆಎಲ್ಎಸ್ ಗೋಗಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಕೆಎಲ್ಎಸ್ ಜಿಐಟಿ) ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವಿಜ್ಞಾನ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೌಶಲ್ಯ ಅಭಿವೃದ್ಧಿ ಮತ್ತು ಭವಿಷ್ಯವನ್ನು ರೂಪಿಸುವಲ್ಲಿ ವಿಜ್ಞಾನದ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೆಎಲ್ಎಸ್ ಜಿಐಟಿಯ ಆಡಳಿತ ಮಂಡಳಿಯ ಅಧ್ಯಕ್ಷ ರಾಜೇಂದ್ರ ಬೆಳಗಾಂವ್ಕರ್ ಮಾತನಾಡಿದರು.

ಭೌತಶಾಸ್ತ್ರದ ಮುಖ್ಯಸ್ಥ ಡಾ. ಎಂ.ಕೆ. ರೆಂದಾಳೆ, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಆರ್.ಎಂ. ಕುಲಕರ್ಣಿಯವರು ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಎಸ್.ಆರ್. ಜೋಗ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net