ವಿಠ್ಠಲ ಮೂರ್ತಿ ತೆರವು

Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ತಾಲೂಕಿನ ಚನ್ನಾಪುರ ಗ್ರಾಪಂ ವ್ಯಾಪ್ತಿಯ ರಾಮಾಪುರ ಗ್ರಾಮದ ಸರ್ಕಾರಿ ಬಾವಿ ಜಾಗೆಯಲ್ಲಿ ಅನಧಿಕೃತವಾಗಿ ಇಟ್ಟಿದ್ದ ವಿಠ್ಠಲ ದೇವರ ಮೂರ್ತಿಯನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ.

ಪೊಲೀಸ್​ರ ಬಂದೋಬಸ್ತ್ ನಡುವೆ ಹುಬ್ಬಳ್ಳಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಯಶವಂತ ಹಾಗೂ ನರೇಗಾ ಸಹಾಯಕ ನಿರ್ದೇಶಕ ಸದಾನಂದ ಅಮರಾಪುರ ನೇತೃತ್ವದಲ್ಲಿ ಬುಧವಾರ ತೆರವು ಕಾರ್ಯಾಚರಣೆ ನಡೆಸಲಾಯಿತು. ಸರ್ಕಾರಿ ಜಾಗವನ್ನು ಅತಿಕ್ರಮಿಸುವ ಉದ್ದೇಶದಿಂದ ಕಿಡಿಗೇಡಿಗಳು ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗ್ರಾಪಂ ಅಧ್ಯಕ್ಷೆ ನಿಂಗಮ್ಮ ಕೆಳಗಿನಮನಿ, ಉಪಾಧ್ಯಕ್ಷೆ ಮೆಹಬೂಬಿ ವಲ್ಲೆನವರ, ಇತರರು ಇದ್ದರು.

ನರೇಗಾ ಯೋಜನೆಯಲ್ಲಿ ಸರ್ಕಾರಿ ಬಾವಿಯನ್ನು ಅಭಿವೃದ್ಧಿ ಪಡಿಸಲು, ಗ್ರಾಪಂ ಪಿಡಿಓ ಅವರಿಗೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net