ವಿಡಿಯೋ ಚಿತ್ರೀಕರಣ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಿಡಿ

IMG-20230807-WA0028.jpg
Published on

ದಾವಣಗೆರೆ: ಉಡುಪಿ ಜಿಲ್ಲೆಯ ನರ್ಸಿಂಗ್ ಕಾಲೇಜಿನ ಶೌಚಗೃಹದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಜಿಲ್ಲಾ ಘಟಕದ ಮಹಿಳಾ ಪದಾಧಿಕಾರಿಗಳು ಜಯದೇವ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11 ವರ್ಷದ ಹಿಂದೆ ನಡೆದಿರುವ ಯುವತಿ ಅತ್ಯಾಚಾರ, ಕೊಲೆ ಪ್ರಕರಣದಲ್ಲಿನ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ಧರ್ಮಸ್ಥಳ ಕ್ಷೇತ್ರದ ಬಗ್ಗೆ ಕಳಂಕ ದೂರವಾಗಬೇಕಾದರೆ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ/ ಹೈಕೋರ್ಟ್ ನ್ಯಾಯಮೂರ್ತಿಯಿಂದಾಗಲೀ ಅಥವಾ ಸಿಬಿಐನಿಂದಾಗಲೀ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ನೀತಾ ನಂದೀಶ್ ಬಳ್ಳಾರಿ, ಎನ್.ಎಸ್.ಸುವರ್ಣಮ್ಮ, ವಿಜಯಲಕ್ಷ್ಮೀ ಕವಿತಾ, ನಾಗವೇಣಿ, ಎನ್.ರತ್ನಮ್ಮ, ಚಂದ್ರಮ್ಮ, ಎ.ಜಿ.ಶ್ರುತಿ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net