ವಿತರಕರ ಸಮ್ಮೇಳನದ ಲಾಂಛನ ಬಿಡುಗಡೆ

Lanchana
Published on

ಚಿತ್ರದುರ್ಗ: ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ, ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ರಾಜ್ಯಮಟ್ಟದ ಪತ್ರಿಕಾ ವಿತರಕರ ಸಮ್ಮೇಳನದ ಲಾಂಛನವನ್ನು ಗುರುವಾರ ಬಿಡುಗಡೆಗೊಳಿಸಿದರು.

ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಿಕೆ ಹಂಚಿಕೆದಾರರ-ವಿತರಕರ ಸಂಘದಿಂದ ಚಿತ್ರದುರ್ಗದಲ್ಲಿ ಸೆ. 8ರಂದು ಸಮ್ಮೇಳನ ಆಯೋಜಿಸಲಾಗಿದೆ.

ಒಕ್ಕೂಟದ ರಾಜ್ಯಾಧಕ್ಷ ಕೆ.ಶಂಭುಲಿಂಗ, ತುಮಕೂರು ಜಿಲ್ಲಾಧ್ಯಕ್ಷ ಚೆಲುವರಾಜ್, ಪ್ರಧಾನ ಕಾರ್ಯದರ್ಶಿ ವಾಸುದೇವ್ ನಾದೂರು, ನಿರ್ದೇಶಕ ಯೋಗೀಶ್, ಚಿತ್ರದುರ್ಗ ಜಿಲ್ಲಾಧ್ಯಕ್ಷ ಎಸ್.ತಿಪ್ಪೇಸ್ವಾಮಿ, ಉಪಾಧ್ಯಕ್ಷರಾದ ಕುಬೇಂದ್ರಪ್ಪ, ಮೋಹನ್‌ಕುಮಾರ್, ಕಾರ್ಯದರ್ಶಿ ಆರ್.ಪ್ರಶಾಂತ್, ನಿರ್ದೇಶಕರಾದ ಮಂಜುನಾಥ್ ನಾಯ್ಡು, ಸುನೀಲ್ ಕವಾಡಿಗರಹಟ್ಟಿ, ಭೀಮಸಮುದ್ರ ವೇದಮೂರ್ತಿ, ಪಾಲಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net