ವಿದೇಶ ಪ್ರವಾಸದಿಂದ ಬಂದವರಿಗೆ ವಿಶೇಷ ವಾರ್ಡ್!

10 lxr 8a
Published on

ಲಕ್ಷ್ಮೇಶ್ವರ: ಪಟ್ಟಣದ ಕದಳಿ ಮಹಿಳಾ ವೇದಿಕೆ ಮತ್ತು ಸಮಾನ ಮನಸ್ಕರ ವೇದಿಕೆಯಿಂದ ವಿದೇಶ ಪ್ರವಾಸಕ್ಕೆ ತೆರಳಿದ್ದ ಒಟ್ಟು 20 ಜನರು ಮಾ.11 ರಂದು ಪಟ್ಟಣಕ್ಕೆ ವಾಪಸ್ ಬರಲಿದ್ದಾರೆ. ಕರೊನಾ ವೈರಸ್ ಹಾವಳಿಯಿಂದ ಇಡೀ ವಿಶ್ವವೇ ಬೆಚ್ಚಿ ಬಿದ್ದಿರುವ ಈ ಸಂದರ್ಭದಲ್ಲಿ ವಿದೇಶದಿಂದ ವಾಪಸ್ ಬಂದವರನ್ನು ಮುಂಜಾಗ್ರತಾ ದೃಷ್ಟಿಯಿಂದ ಪರೀಕ್ಷೆಗೊಳಪಡಿಸುವ ನಿಟ್ಟಿನಲ್ಲಿ ತಾಲೂಕಾಡಳಿತ ಕ್ರಮ ಕೈಗೊಂಡಿದೆ ಎಂದು ತಹಸೀಲ್ದಾರ್ ಭ್ರಮರಾಂಬ ಗುಬ್ಬಿಶೆಟ್ಟಿ ತಿಳಿಸಿದರು.

ಮಲೇಷಿಯಾ, ಹಾಂಕಾಂಗ್, ಇಂಡೋನೇಶಿಯಾ ಪ್ರವಾಸ ಮುಗಿಸಿ 20 ಜನರ ತಂಡ ಮಾ. 9ರಂದು ಸುರಕ್ಷಿತವಾಗಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಎಲ್ಲರನ್ನೂ ಪರೀಕ್ಷೆಗೊಳಪಡಿಸಿದ್ದು ಯಾವುದೇ ಆತಂಕವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಮಾ. 11 ರಂದು ಪಟ್ಟಣಕ್ಕೆ ಬರಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತದ ಸೂಚನೆಯಂತೆ ತಾಲೂಕಾಡಳಿತ ಸೂಕ್ತ ಕ್ರಮ ಕೈಗೊಂಡಿದೆ. ಆಸ್ಪತ್ರೆಯ ಆಂಬುಲೆನ್ಸ್ ಮೂಲಕ ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗುವುದು. ಆಸ್ಪತ್ರೆಯಲ್ಲಿ ಅವರಿಗಾಗಿ ವಿಶೇಷ ವಾರ್ಡ್​ನ ವ್ಯವಸ್ಥೆ ಮಾಡಲಾಗಿದೆ. ಇಲ್ಲಿನ ಅವರನ್ನು ಮತ್ತೊಮ್ಮೆ ಪರೀಕ್ಷೆಗೊಳಪಡಿಸಿ ಅವರ ಆರೋಗ್ಯದ ಮೇಲೆ ನಿಗಾವಹಿಸಲಾಗುವುದು ಎಂದು ತಾಲೂಕಾ ವೈದ್ಯಾಧಿಕಾರಿ ಸುಭಾಸ್ ದಾಯಗೊಂಡ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net