ವಿದೇಶದಲ್ಲೂ ಆಯುರ್ವೇದಕ್ಕೆ ಮನ್ನಣೆ

ayurveda
Published on

ಮೈಸೂರು: ಆಯುರ್ವೇದ ಚಿಕಿತ್ಸಾ ಪದ್ಧತಿಯ ಕುರಿತು ಜಾಗೃತಿ ಮೂಡಿಸುವ ಮೂಲಕ ಹೆಚ್ಚಿನ ಜನರು ಇದರ ಸದುಪಯೋಗ ಪಡೆದುಕೊಳ್ಳಲು ಪ್ರೇರೇಪಿಸಬೇಕಿದೆ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಸಹಯೋಗದಲ್ಲಿ ಕೆ.ಜಿ.ಕೊಪ್ಪಲಿನ ಸರ್ಕಾರಿ ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 9ನೇ ರಾಷ್ಟ್ರೀಂು ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ವಾತನಾಡಿದರು.

ಭಾರತವು ಆಯುರ್ವೇದ ಚಿಕಿತ್ಸಾ ಪದ್ಧತಿಯನ್ನು ಜಗತ್ತಿಗೆ ಪರಿಚಯಿಸಿದೆ. ಇದು ಶತ ಶತಮಾನಗಳಿಂದಲೂ ಈ ವೈದ್ಯ ಪದ್ಧತಿಯನ್ನು ಅನುಸರಿಸಿಕೊಂಡು ಬರಲಾಗಿದೆ. ಇದರ ಫಲವಾಗಿ ವಿದೇಶದಲ್ಲೂ ಇದು ಜನಮನ್ನಣೆ ಪಡೆದುಕೊಂಡಿದೆ.

ಆದ್ದರಿಂದ ಆಯುರ್ವೇದ ವೈದ್ಯಕೀಯ ಪದ್ಧತಿಯಲ್ಲಿ ಕೆಲಸ ಮಾಡುವವರು ಈ ಕುರಿತು ಅರಿವು ಮೂಡಿಸಬೇಕು ಎಂದರು.

ಬದಲಾದ ಜೀವನ ಶೈಲಿ, ಆಹಾರ ಪದ್ಧತಿಯಿಂದಾಗಿ ವಿವಿಧ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ. ಇದಕ್ಕೆ ಆಯುರ್ವೇದ ಚಿಕಿತ್ಸಾ ವಿಧಾನ ಪರಿಣಾಮಕಾರಿಯಾಗಿದೆ. ಅನೇಕ ರೋಗಗಳನ್ನು ಗುಣಪಡಿಸಬಹುದು ಎಂದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಪುಷ್ಪಾ, ಶ್ರೀಪತಂಜಲಿ ಯೋಗ ಫೌಂಡೇಷನ್ ಪ್ರಾಂತ ಪ್ರಮುಖರಾದ ಕೋಮಲಾ, ನಗರ ಸಂಘಟನಾ ಪ್ರಮುಖ ಮಹಾದೇವ, ನಗರ ಸಂಚಾಲಕ ನಾಗೇಂದ್ರ ಅರಸು, ಕಾರ್ಯದರ್ಶಿ ಕಾಳಜಿ, ಯೋಗ ಕಾಲೇಜಿನ ಪ್ರಾಂಶುಪಾಲ ಡಾ.ರಾಧಾಕೃಷ್ಣ, ಆರ್‌ಎಂಒ ಡಾ.ಹರಿ ಗಣೇಶ್, ವೈದ್ಯಾಧಿಕಾರಿ ಸಂಘದ ಜಿಲ್ಲಾಧ್ಯಕ್ಷ ಡಾ.ಯತೀಶ್, ಕೆ.ಜಿ.ಕೊಪ್ಪಲಿನ ಸರ್ಕಾರಿ ಪ್ರಕೃತಿ ಚಿಕಿತ್ಸೆ ಆಸ್ಪತ್ರೆಂು ಆಡಳಿತ ವೈದ್ಯಾಧಿಕಾರಿ ಡಾ.ಸುರೇಶ್, ಔಷಧ ಪರಿವೀಕ್ಷಕಿ ಡಾ.ವೇದಾವತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net