ವಿದೇಶಿ ವ್ಯಾಸಂಗ ವೇತನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

Adarsha Shakshaka Prashasti Application
Published on

ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಡಿ. ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕಾಗಿ 2024-25ನೇ ಸಾಲಿನ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಮಾಡಲು ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ ಹಾಗೂ 3ಬಿ ವರ್ಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 5ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ವಿವರಗಳಿಗೆ ಇಲಾಖೆಯ ವೆಬ್ ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ ಅಥವಾ ಮೊ.ಸಂ 8050770004 ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net