ವಿದ್ಯಾಭ್ಯಾಸಕ್ಕೆ ಪ್ರಾಶಸ್ತ್ಯ ನೀಡಿ

Kdr avbba
ಕಡೂರು ಸರ್ಕಾರಿ ಪಿಯು ಕಾಲೇಜಿನ ಸಾಂಸ್ಕೃತಿಕ ಸಮಾರೋಪ ಸಮಾರಂಭವನ್ನು ಶಾಸಕ ಕೆ.ಎಸ್.ಆನಂದ್ ಉದ್ಘಾಟಿಸಿದರು, ಭಂಡಾರಿ ಶ್ರೀನಿವಾಸ್, ಡಾ. ತವರಾಜ್, ಸಿ.ಎಂ.ಯೋಗೇಶ್ ಇತರರಿದ್ದರು.
Published on

ಕಡೂರು: ಪರೀಕ್ಷೆಗಳು ಸಮೀಪಿಸುತ್ತಿದ್ದು ಓದಿಗೆ ಹೆಚ್ಚು ಸಮಯಾವಕಾಶ ಮೀಸಲಿಟ್ಟರೆ ಮುಂದಿನ ದಿನಗಳಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಸಮಾರೋಪದಲ್ಲಿ ಮಾತನಾಡಿ, ಓದಿನ ಸಮಯದಲ್ಲಿ ಅನವಶ್ಯಕವಾಗಿ ಕಾಲ ಕಳೆಯದೆ ಹೆಚ್ಚು ಅಧ್ಯಯನ ಮಾಡಬೇಕು. ಪಾಲಕರು ಶ್ರಮಪಟ್ಟು ವಿದ್ಯಾಭ್ಯಾಸಕ್ಕೆ ಪ್ರಾಮುಖ್ಯತೆ ನೀಡುತ್ತಾರೆ. ಅವರಿಗೆ ಗೌರವ ನೀಡುವ ಉದ್ದೇಶದೊಂದಿಗೆ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದರು.

ಕಾಲೇಜಿಗೆ 2.81 ಕೋಟಿ ರೂ.ನಲ್ಲಿ ಕೊಠಡಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಕ್ರೀಡಾಂಗಣ ಅಭಿವದ್ಧಿಗೆ 5 ಕೋಟಿ ರೂ. ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೌಚಗೃಹ ದುರಸ್ತಿಗೆ ಅನುದಾನ ನೀಡಲಾಗುತ್ತದೆ ಎಂದು ಹೇಳಿದರು.

ಸರ್ಕಾರವೇ ನೀಟ್, ಸಿಇಟಿ ಪರೀಕ್ಷೆಗಳಿಗೆ ಆನ್‌ಲೈನ್‌ನಲ್ಲಿ ತರಗತಿಗಳನ್ನು ನೀಡುತ್ತಿದ್ದು, ಅಂತಹ ಮಕ್ಕಳಿಗೆ ಸಂಜೆ ಉಪಾಹಾರ ವ್ಯವಸ್ಥೆ ಮಾಡಿಕೊಡಲಾಗುತ್ತದೆೆ ಎಂದರು.

ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಮಾತನಾಡಿ, ನಾನು ಇದೇ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದೆ. ನಾಲ್ಕು ದಶಕಗಳಿಂದ ಸಾವಿರಾರು ವಿದ್ಯಾರ್ಥಿಗಳು ಇಲ್ಲಿ ಕಲಿತು ಉತ್ತಮ ಸ್ಥಾನದಲ್ಲಿದ್ದಾರೆ. ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಬಂದರೆ ಉತ್ತಮ ಲಿತಾಂಶ ತರಲು ಸಾಧ್ಯ ಎಂದು ಹೇಳಿದರು.

ಪ್ರಾಚಾರ್ಯ ಡಾ. ಎಸ್.ಎಸ್.ತವರಾಜ್ ಮಾತನಾಡಿ, ಶಾಸಕರು ಕಾಲೇಜಿಗೆ ಬೇಕಾದಂತಹ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಮುಂದಿನ ದಿನಗಳಲ್ಲಿ ಕಾಲೇಜಿನ ಒಳ ಆವರಣದ ನೆಲಹಾಸಿಗೆಗೆ ಕಾಂಕ್ರಿಟ್ ಹಾಕಿಸಿಕೊಡಬೇಕು. ಕಾಲೇಜಿನ ಮುಖ್ಯದ್ವಾರ ನಿರ್ಮಿಸಲು ಸಹಕರಿಸುವಂತೆ ಮನವಿ ಮಾಡಿದರು.

ಹಾಸನದ ಎವಿಕೆ ಕಾಲೇಜಿನ ನಿವತ್ತ ಪ್ರಾಚಾರ್ಯ ಸಿ.ಎಂ.ಯೋಗೇಶ್, ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಹಾದಾರ್ಢ್ಯ ಸ್ಪರ್ಧೆಯಲ್ಲಿ ಪದಕಗಳಿಸಿದ ಚೇತನ್ ಕೋಡಪ್ಪ ಅವರನ್ನು ಗೌರವಿಸಲಾಯಿತು. ಪುರಸಭೆ ಆರೋಗ್ಯ ಅಧಿಕಾರಿ ಶ್ರೀನಿವಾಸ್, ಪೌರನೌಕರರನ್ನು ಗೌರವಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net