ವಿದ್ಯಾರ್ಜನೆಯಿಂದ ಬುದ್ಧಿ ವಿಕಸನ

27-npk- 2
Published on

ನಾಪೋಕ್ಲು: ವಿದ್ಯಾರ್ಜನೆ ಮಾಡುವುದರ ಮೂಲಕ ಬುದ್ದಿ ವಿಕಸನಗೊಂಡು ಪ್ರತಿಯೊಬ್ಬರು ಉನ್ನತಿಯನ್ನು ಹೊಂದಲು ಸಾಧ್ಯ ಈ ನಿಟ್ಟಿನಲ್ಲಿ ಸಮಾಜದ ಉನ್ನತಿಗೆ ಪ್ರತಿಯೊಬ್ಬರು ಶ್ರಮಿಸುವಂತಾಗಬೇಕೆಂದು ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿ.ಜಿ.ಬೋಪಯ್ಯ ಸಲಹೆ ನೀಡಿದರು.

ಕರ್ನಾಟಕ ಪಬ್ಲಿಕ್ ಶಾಲೆಯ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣವನ್ನು ನೆರವೇರಿಸಿದರು. ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭದ ಕಾರ್ಯಕ್ರಮದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಎ.ಹಾರಿಸ್, ಪ್ರಭಾರ ಪ್ರಾಂಶುಪಾಲೆ ಡಾ.ಅವನಿಜ ಸೋಮಯ್ಯ, ಉಪ ಪ್ರಾಂಶುಪಾಲ ಶಿವಣ್ಣ ,ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಚಂದ್ರಕಲಾ, ಶಾಲೆಯ ಕಟ್ಟಡ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಬಿ.ಪಿ.ಜಿನ್ನು ನಾಣಯ್ಯ, ಶಾಲಾ ಶೈಕ್ಷಣಿಕ ಗುಣಮಟ್ಟ ಖಾತ್ರಿ ಉಪ ಸಮಿತಿ ಅಧ್ಯಕ್ಷ ಉದಯಶಂಕರ್, ಶಾಲಾ ಆಡಳಿತ ಮಂಡಳಿ ಸದಸ್ಯರು, ಜಿ.ಎಂ.ಪಿ. ಶಾಲಾ ಮುಖ್ಯ ಶಿಕ್ಷಕಿ ಚಂದ್ರಕಲಾ, ಶಿಕ್ಷಕ ಮಾದೇಶ್, ಶಿಕ್ಷಕಿ ಉಷಾ ರಾಣಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net