ವಿದ್ಯಾರ್ಥಿ ಜೀವನ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖ

10-SanduruP1
Published on

ಸಂಡೂರು: ಪ್ರತಿಭೆ ಪ್ರತಿಯೊಬ್ಬ ಪ್ರಶಿಕ್ಷಣಾರ್ಥಿಗಳಲ್ಲಿ ಅಡಕವಾಗಿರುತ್ತದೆ. ಅದನ್ನು ಹೊರ ತಂದು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶ್ರೀಶೈಲೇಶ್ವರ ವಿದ್ಯಾಕೇಂದ್ರದ ಆಡಳಿತಾಧಿಕಾರಿ ಕುಮಾರ ಎಸ್.ನಾನಾವಟೆ ತಿಳಿಸಿದರು.

ಪಟ್ಟಣದ ಶ್ರೀಶೈಲೇಶ್ವರ ವಿದ್ಯಾಕೇಂದ್ರದ ಲಕ್ಷ್ಮಿ ಎಸ್.ನಾನಾವಟೆ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಪ್ರಥಮ ವರ್ಷದ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗೆ ಸ್ವಾಗತ ಹಾಗೂ ವಿದ್ಯಾರ್ಥಿ ಸಂಘದ ಕಾರ್ಯಕ್ರಮ ಉದ್ಘಾಟಿಸಿ ಬುಧವಾರ ಮಾತನಾಡಿದರು. ಶಿಕ್ಷಕರು ಓದಿನೊಂದಿಗೆ ಸಹ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ, ನೃತ್ಯ, ಸಂಗೀತ, ಸಾಹಿತ್ಯ, ಚರ್ಚಾ ಸ್ಪರ್ಧೆ, ಭಾಷಣದಂತಹ ಕೌಶಲ ಮೈಗೂಡಿಸಿಕೊಂಡು ಉತ್ತಮ ಸಮಾಜದ ನಿರ್ಮಾಣದ ಕಡೆಗೆ ಸಾಗಬೇಕು ಎಂದರು.

ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ. ವಿದ್ಯಾರ್ಥಿಗಳಿಗೆ ಜ್ಞಾನ ನೀಡುವುದಲ್ಲದೆ, ಸ್ಫೂರ್ತಿ ಮತ್ತು ಮಾರ್ಗದರ್ಶನ ನೀಡಬೇಕು. ವಿಮರ್ಶಾತ್ಮಕ ಚಿಂತನೆ ಮತ್ತು ಸಮಸ್ಯೆ ಪರಿಹರಿಸುವ ಕೌಶಲಗಳನ್ನು ಅಭಿವೃದ್ಧಿಪಡಿಸಲು ಸದಾ ಸಹಾಯ ಮಾಡಬೇಕು. ಉತ್ತಮ ಶಿಕ್ಷಕರಾದವರು ವಿದ್ಯಾರ್ಥಿಯ ಶೈಕ್ಷಣಿಕ ಮತ್ತು ವೈಯಕ್ತಿಕ ಬೆಳವಣಿಗೆಯಲ್ಲಿ ಗಮನಾರ್ಹ ಪಾತ್ರವನ್ನು ನಿರ್ವಹಿಸಬಲ್ಲರು ಎಂದು ಕುಮಾರ ಎಸ್.ನಾನಾವಟೆ ತಿಳಿಸಿದರು.

ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕ ಡಾ.ಎಚ್.ತಿಪ್ಪೇಸ್ವಾಮಿ ಮಾತನಾಡಿ, ಪ್ರಶಿಕ್ಷಣಾರ್ಥಿಗಳು ಶಿಸ್ತು, ಸಮಯ ಪಾಲನೆ, ತಾಳ್ಮೆ, ವಿನಯವಂತಿಕೆ, ಗುರು-ಹಿರಿಯರಿಗೆ ಗೌರವ ಕೊಡುವುದನ್ನು ಮರೆಯಬಾರದು. ಶ್ರದ್ಧೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧವಾಗಿ ಜೀವನದ ಗುರಿ ತಲುಪಬೇಕು ಎಂದು ತಿಳಿಸಿದರು. ಪ್ರಾಚಾರ್ಯರಾದ ಯು.ದೇವರಾಜ್, ಜಿ.ಎಂ.ಅಶೋಕ್, ಸಿಬ್ಬಂದಿ ಇದ್ದರು. ಪ್ರಶಿಕ್ಷಣಾರ್ಥಿಯಾದ ವಿಜಯ ಭಾರತಿ, ಪ್ರೇಮ, ಕಂಠೀರಂಗ, ನಜ್ಮೀನ್ ತಾಜ್ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net