ವಿದ್ಯಾರ್ಥಿ ಜೀವನದಲ್ಲಿ ನಿಶ್ಚಿತ ಗುರಿ ಇರಲಿ

08-GPT-2
Published on

ಗುಂಡ್ಲುಪೇಟೆ: ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಏಕಾಗ್ರತೆಯಿಂದ ವಿದ್ಯಾಭ್ಯಾಸ ಮಾಡಿದರೆ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಬಹುದು ಎಂದು ಪಡಗೂರು ಅಡವಿ ಮಠಾಧ್ಯಕ್ಷ ಶ್ರೀ ಶಿವಲಿಂಗೇಂದ್ರ ಸ್ವಾಮೀಜಿ ಹೇಳಿದರು.


ಕಳೆದ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುನ್ನತ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪಟ್ಟಣದ ಶ್ರೀ ಮದ್ದಾನೇಶ್ವರ ವಿದ್ಯಾಸಂಸ್ಥೆ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ನಿಶ್ಚಿತ ಗ ುರಿ ಹೊಂದಿರುವುದರ ಜತೆಗೆ ಏಕಾಗ್ರತೆ ಇದ್ದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದರು.


ವಿದ್ಯಾರ್ಥಿಗಳು ಪ್ರಶ್ನಿಸುವ ಸ್ವಭಾವವನ್ನು ಬೆಳೆಸಿಕೊಳ್ಳುವುದರಿಂದ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು. ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದರೊಂದಿಗೆ ಬದುಕಿಗೆ ಮಾರ್ಗದರ್ಶನವನ್ನೂ ನೀಡಲಾಗುತ್ತದೆ ಎಂದರು.


2022- 23ನೇ ಸಾಲಿನಲ್ಲಿ ಅತ್ಯುನ್ನತ ದರ್ಜೆಯಲ್ಲಿ ಉತ್ತೀರ್ಣರಾದ ಎಚ್.ಎಸ್.ಸ್ಪಂದನಾ (595), ಬಿ.ಎಂ.ತೇಜು (594), ಐಶ್ವರ್ಯಾ (592), ಎಚ್.ಎಂ.ಸಂಕಲ್ಪಾ (585), ಕೆ.ಎಸ್.ಜೀವಿತ್(577) ಸೇರಿದಂತೆ 42 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಂ.ಸಿ.ಸ್ವಾಮಿ, ಮುಂಯ ಶಿಕ್ಷಕ ಪ್ರಕಾಶ್, ಪಬ್ಲಿಕ್ ಶಾಲೆ ಪ್ರಾಂಶುಪಾಲ ನಟರಾಜು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಶೈಲ ಕುಮಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net