ವಿದ್ಯಾರ್ಥಿ ವೇತನ ಕಡಿತಕ್ಕೆ ವಿರೋಧ

Students
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.5869838, 0.48074988);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 36;
Published on

ಚಿತ್ರದುರ್ಗ: ಎಸ್ಸಿ-ಎಸ್ಟಿ ವಿದ್ಯಾರ್ಥಿ ವೇತನ ಕಡಿತಗೊಳಿಸಿರುವುದನ್ನು ವಿರೋಧಿಸಿ ಸರಸ್ವತಿ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

ಬೇಡಿಕೆಗಳಿಗೆ ಸ್ಪಂದಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿದರು.

ರಾಜ್ಯ ಕಾನೂನು ವಿವಿ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೂ ಹೆಚ್ಚುವರಿ ಪರೀಕ್ಷಾ ಶುಲ್ಕ ನಿಗದಿಪಡಿಸಿದ್ದು, ಹಿಂದಿನ ವರ್ಷದಂತೆ ಪ್ರಸಕ್ತ ಸಾಲಿನಲ್ಲೂ ಪರೀಕ್ಷಾ ಶುಲ್ಕ ಮುಂದುವರೆಸಬೇಕು ಎಂದು ಆಗ್ರಹಿಸಿದರು.

ವಿದ್ಯಾರ್ಥಿ ವೇತನ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಹಂಚಿಕೆಯಾಗಿಲ್ಲ. ಸಮಾಜ ಕಲ್ಯಾಣ ಇಲಾಖೆಯಿಂದ ಕಡಿತಗೊಳಿಸಿದ್ದು, ಹಿಂದಿನಂತೆ ನೀಡಬೇಕು. ಹೆಚ್ಚುವರಿ ಪರೀಕ್ಷಾ ಶುಲ್ಕ ಕಡಿಮೆಗೊಳಿಸಿ ಅನುಕೂಲ ಮಾಡಿಕೊಡಲು ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net