ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಮೈಸೂರಿನಲ್ಲಿ ಎಐಡಿಎಸ್‌ಒ ಪ್ರತಿಭಟನೆ

AIDSO
Published on

ಮೈಸೂರು: ಎನ್‌ಇಪಿ ಮೊದಲ ಬ್ಯಾಚ್‌ನ ಪದವಿ ವಿದ್ಯಾರ್ಥಿಗಳ ಫಲಿತಾಂಶವನ್ನು ಕೂಡಲೇ ಪ್ರಕಟಿಸಬೇಕು, ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಎಐಡಿಎಸ್‌ಒ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಯಿತು.

ಈಗಾಗಲೇ ರಾಜ್ಯದಲ್ಲಿ ಎನ್‌ಇಪಿ ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತಲುಪಿದ್ದಾರೆ. ಆದರೂ ಸಹ ಅವರ ಮೊದಲ ವರ್ಷದ ಫಲಿತಾಂಶ ಬಿಡುಗಡೆಯಾಗಿಲ್ಲ. ಕೂಡಲೇ ಫಲಿತಾಂಶ ಬಿಡುಗಡೆ ಮಾಡಬೇಕು. ಹಾಗೆಯೇ, ವಿದ್ಯಾರ್ಥಿವೇತನ ವಿತರಣೆ ಆಗದೆ ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿದ್ದು, ಕೂಡಲೇ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ಎಂದು ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಸುಭಾಷ್ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಪದಾಧಿಕಾರಿಗಳಾದ ನಿತಿನ್, ಚಂದ್ರಕಲಾ, ಚಂದ್ರಿಕಾ, ಚಂದನ, ಹೇಮಲತಾ, ಜೇವನ್, ಪ್ರಜ್ವಲ್ ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net