ವಿದ್ಯಾರ್ಥಿ ವೇತನ ಸ್ಥಗಿತಕ್ಕೆ ಆಕ್ರೋಶ

CTD 27 NEWS STRIKE--05
Published on

ಚಿತ್ರದುರ್ಗ: ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೂಡಲೇ ವಿದ್ಯಾರ್ಥಿ ವೇತನ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ‌್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ರಂಗಯ್ಯಬಾಗಿಲಿನಿಂದ ಪ್ರಮುಖ ವೃತ್ತಗಳು ಹಾಗೂ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಒನಕೆ ಒಬವ್ವ ವೃತ್ತದಲ್ಲಿ ಮಾನವ ಸರಪಳಿ ರಚಿಸಿದ ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕೂಡಲೇ ವಿದ್ಯಾರ್ಥಿ ವೇತನ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಎಬಿವಿಪಿ ಜಿಲ್ಲಾ ಸಂಚಾಲಕ ಸಿದ್ದೇಶ್, ನಗರ ಕಾರ್ಯದರ್ಶಿ ಗೋಪಿ, ಕನಕರಾಜ್ ಕೋಡಿಹಳ್ಳಿ, ಮನೋಜ್, ಚಿತ್ರಸ್ವಾಮಿ, ಅಜ್ಜಯ್ಯ, ಕಾಟಲಿಂಗೇಶ್, ಸುಮನ್, ಚೈತ್ರಾ, ಲಕ್ಷ್ಮೀ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net