ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆ ಪ್ರೋತ್ಸಾಹಿಸಿ

21 KRN-5
Published on

ಕೆ.ಆರ್.ನಗರ: ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಉತ್ತಮ ಸಾಧನೆ ಮಾಡಲು ಶಿಕ್ಷಕರು ಪ್ರೇರೇಪಿಸಬೇಕೆಂದು ಶಾಸಕ ಡಿ.ರವಿಶಂಕರ್ ಸಲಹೆ ನೀಡಿದರು.

ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರೌಢಶಾಲಾ ನೌಕರರ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲೂಕು ಸಂಘದ ವತಿಯಿಂದ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರಿಗೆ ಸನ್ಮಾನ ಹಾಗೂ ತಾಲೂಕಿನಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹಿಂದೆ ನಮ್ಮ ತಾಲೂಕು ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ 9ನೇ ಸ್ಥಾನದಲ್ಲಿತ್ತು. ತಮ್ಮೆಲ್ಲರ ಸಹಕಾರದಿಂದ ಕಳೆದ ಸಾಲಿನಲ್ಲಿ 4ನೇ ಸ್ಥಾನಕ್ಕೆ ಬಂದಿದೆ. ಈ ಸಾಲೀನ ಪರೀಕ್ಷೆಯಲ್ಲಿ ಪ್ರಥಮ ಸ್ಥಾನಕ್ಕೆ ತರಲು ಪ್ರಯತ್ನಿಸಬೇಕೆಂದು ಕರೆ ನೀಡಿದ ಅವರು, ಯಾವುದೇ ಸಹಾಯ ಬೇಕಿದ್ದರೂ ನಾನು ಸಹಕಾರ ನೀಡುತ್ತೇನೆ ಎಂದು ಭರವಸೆ ನೀಡಿದರು.

ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೆಶಕ ಜವರೇಗೌಡ, ಪುರಸಭಾ ಅಧ್ಯಕ್ಷ ಶಿವುನಾಯಕ್ ಮಾತನಾಡಿದರು. ವೇದಿಕೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳು, ನಿವೃತ್ತ ನೌಕರರು ಹಾಗೂ ಸಾಧಕರನ್ನು ಸನ್ಮಾನಿಸಲಾಯಿತು.

ಪುರಸಭಾ ಸದಸ್ಯರಾದ ಕೋಳಿ ಪ್ರಕಾಶ್, ಸೈಯದ್‌ಸಿದ್ದಿಕ್, ಮಾಜಿ ಸದಸ್ಯ ವಿನಯ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ಡಿ.ನಟರಾಜ್, ಬಿಇಒ ಆರ್.ಕೃಷ್ಣಪ್ಪ, ಸಂಘದ ಗೌರವಾಧ್ಯಕ್ಷ ಕೆ.ಸಿ.ಪ್ರಕಾಶ್, ಅಧ್ಯಕ್ಷ ಕೆ.ಜ್ಯೋತಿ ಕುಮಾರ್, ಉಪಾಧ್ಯಕ್ಷ ಪಿ.ಸತೀಶಹೆಬ್ಬಾಳ್, ಕಾರ್ಯದರ್ಶಿ ಯತೀಶ್, ಖಜಾಂಚಿ ಎಂ.ಪಿ.ಶಿವಶಂಕರ್, ಸಹ ಕಾರ್ಯದರ್ಶಿ ಎ.ಜೆ.ಚಂದ್ರೇಗೌಡ, ಸಂಘಟನಾ ಕಾರ್ಯದರ್ಶಿ ಕೃಷ್ಣೇಗೌಡ, ಅಕ್ಷರ ದಾಸೋಹ ಅಧಿಕಾರಿ ಸ್ವಾಮಿಗೌಡ, ಸಿಆರ್‌ಪಿ ವಸಂತ, ಸಂಘದ ನಿರ್ದೇಶಕರು ಹಾಗೂ ತಾಲೂಕಿನ ಅನುದಾನಿತ ಪ್ರೌಢಶಾಲೆಯ ನೌಕರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net