ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು

10.npk-1
Published on

ನಾಪೋಕ್ಲು: ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದು ಶಿಕ್ಷಕಿ ಕೆ. ಎಸ್. ಶೋಭಾ ಹೇಳಿದರು.

ಇಲ್ಲಿನ ಶ್ರೀರಾಮ ಟ್ರಸ್ಟ್ ವಿದ್ಯಾಸಂಸ್ಥೆ ವತಿಯಿಂದ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.

ನಿವೃತ್ತ ಪ್ರಾಂಶುಪಾಲ ಹಾಗೂ ಸಂಸ್ಥೆಯ ಹಿರಿಯ ನಿರ್ದೇಶಕ ಪ್ರೊ.ಕಲ್ಯಾಟಂಡ ಪೂಣಚ್ಚ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಡಾ.ರಾಧಾಕೃಷ್ಣನ್ ಆಳವಾದ ಜ್ಞಾನವನ್ನು ಹೊಂದಿದ್ದರು. ದೇಶದ ರಾಷ್ಟ್ರಪತಿಗಳಾಗಿ ಸೇವೆ ಸಲ್ಲಿಸಿದ್ದರು ಎಂಬುದನ್ನು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ವತಿಯಿಂದ ಶಿಕ್ಷಕ ವೃಂದದವರಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು. ವೇದಿಕೆಯಲ್ಲಿ ಪ್ರಾಂಶುಪಾಲೆ ಬಿ.ಎಂ.ಶಾರದಾ ಶಿಕ್ಷಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net