ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

Published on

ಕೊರಟಗೆರೆ: ಪಟ್ಟಣದ ಕನಕದಾಸ ವೃತ್ತದಲ್ಲಿ ಬುಧವಾರ ಮಧ್ಯಾಹ್ನ ಹೆಜ್ಜೇನು ದಾಳಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 5 ವಿದ್ಯಾರ್ಥಿಗಳು, ಇಬ್ಬರು ಉಪನ್ಯಾಸಕರು ಮತ್ತು ಕೆಲವು ದ್ವಿಚಕ್ರ ವಾಹನ ಸವಾರರು ಗಾಯಗೊಂಡಿದ್ದು, ಹಲವು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಸ್ಥಳಿಯರು ಕಾರ್ಯಪ್ರವೃತ್ತರಾಗಿ ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸರ್ಕಾರೀ ಕಾಲೇಜಿನ ಪ್ರಾಂಶುಪಾಲ ಈರಪ್ಪನಾಯ್ಕ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ ಆರೋಗ್ಯ ವಿಚಾರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net