ವಿದ್ಯಾರ್ಥಿಗಳ ವಿಜ್ಞಾನ ಮಾದರಿಗೆ ರಾಜ್ಯ ಮಟ್ಟದ ಪ್ರಶಸ್ತಿ

29 skpp 2
Published on

ಸಕಲೇಶಪುರ: ಸೆನ್ಸಾರ್ ತಂತ್ರಜ್ಞಾನದ ಮೂಲಕ ಕಾಡಾನೆ ಮತ್ತು ಮಾನವ ಸಂಘರ್ಷ ನಿಯಂತ್ರಣ ಕುರಿತು ಹೆತ್ತೂರು ಮುರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಅಭಿವೃದ್ಧಿಪಡಿಸಿದ ವಿಜ್ಞಾನ ಮಾದರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದೆ.


ಬೆಂಗಳೂರಿನ ಅರಮನೆ ಮೈದಾನದಲ್ಲಿ ಜ.27 ಹಾಗೂ 28ರಂದು ಎರಡು ದಿನಗಳ ಕಾಲ ಕರ್ನಾಟಕ ವಸತಿ ಶಿಕ್ಷಣ ಸಂಘ ಹಾಗೂ ಸಮಾಜ ಕಲ್ಯಾಣ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ವಿಜ್ಞಾನ ಮೇಳದಲ್ಲಿ ಹೆತ್ತೂರು ಮುರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಸಿದ್ಧಪಡಿಸಿದ್ದ ವಿಜ್ಞಾನ ಮಾದರಿಗೆ ವಿಭಾಗೀಯ ಮಟ್ಟದಲ್ಲಿ ದ್ವಿತಿಯ ಸ್ಥಾನ ದೊರೆತಿದೆ.

ವಿಜ್ಞಾನ ಮೇಳದಲ್ಲಿ ವಿದ್ಯುತ್ ಕಳ್ಳತನ ನಿಯಂತ್ರಣ, ಬಯೋಗ್ಯಾಸ್, ನ್ಯಾಚುರಲ್ ಎಸಿ, ಸೆನ್ಸಾರ್ ಬಿದಿ ದೀಪಗಳಂತ ಹಲವು ಮಾದರಿಗಳು ಮೇಳದಲ್ಲಿ ಗಮನ ಸೇಳದವು ಎಂದು ಶಾಲೆಯ ಪ್ರಾಂಶುಪಾಲರಾದ ಶಾಂತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಜ್ಞಾನ ಮೇಳದಲ್ಲಿ ಮಾದರಿ ಮಾರ್ಗದರ್ಶಕ ಶಿಕ್ಷಕಿ ಜಾಹ್ನವಿ, ವಿದ್ಯಾರ್ಥಿಗಳಾದ ಕ್ಷಮಿತಾ, ಲಕ್ಷ್ಮೀ, ರೇಖಾ, ಸ್ಮಿತಾ, ಪ್ರಗತಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net