ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಡಿ.17ರಂದು ಬೃಹತ್ ಪ್ರತಿಭಟನೆ

ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಡಿ.17ರಂದು ಬೃಹತ್ ಪ್ರತಿಭಟನೆ
Published on

ಹಾಸನ : ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ವಿದ್ಯಾರ್ಥಿಗಳಿಗೆ ಯಾವುದೇ ಸರ್ಕಾರಿ ಸೌಲಭ್ಯಗಳು ಸಿಗುತ್ತಿಲ್ಲ ಹಾಗಾಗಿ ಇದನ್ನು ಖಂಡಿಸಿ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಡಿ.17ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ಸುಪ್ರೀತ್ ಗೌಡ ತಿಳಿಸಿದರು.

ವಿದ್ಯಾರ್ಥಿಗಳಿಗೆ ಇತ್ತಿಚೀನ ದಿನಗಳಲ್ಲಿ ಹೆಚ್ಚಿನ ಸಮಸ್ಯೆ ಉಂಟಾಗುತ್ತಿದ್ದು, ಕೆಲವೊಂದು ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಸರ್ಕಾರದಿಂದ ಬರುವ ವಿದ್ಯಾರ್ಥಿವೇತನ ಮಾಡುತ್ತಿರುತ್ತಾರೆ ಆದರೆ ಕಳೆದ 2 ವರ್ಷಗಳಿಂದ ಸೋಂಕಿನ ನೆಪತೋರಿ ವಿದ್ಯಾರ್ಥಿಗಳಿಗೆ ವೇತನ ನೀಡುವುದನ್ನೇ ನಿಲ್ಲಿಸಿದ್ದು, ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತ ಪಡಿಸಿದ ಅವರು ನಗರದ ಸಾಲಗಾಮೆ ಗೇಟ್ ಬಳಿಇರುವ ವಿಜ್ಞಾನ ಕಾಲೇಜಿನಿಂದ ಪ್ರತಿಭಟನಾ ಜಾಥ ಪ್ರಾರಂಭಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಮನವಿಸಲ್ಲಿಸಲಾಗುವುದು ಎಂದರು.

ಬಸ್ಸ್ ವ್ಯವಸ್ಥೆ ಕಡಿಮೆ ಇರುವುದರಿಂದ ಹಳ್ಳಿಗಾಡಿನಿಂದ ಬರುವ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲಾ -ಕಾಲೇಜುಗಳಿಗೆ ಹಾಜರಾಗಲು ಸಮಸ್ಯೆಯಾಗುತ್ತಿದೆ ಅಲ್ಲದೆ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡದೆ ಸರ್ಕಾರಿ ಶಾಲಾ -ಕಾಲೇಜುಗಳಲ್ಲಿ ಪ್ರವೇಶ ಶುಲ್ಕ ಹಾಗೂ ಇತರೆ ಶುಲ್ಕಗಳನ್ನು ಹೆಚ್ಚುಮಾಡುತ್ತಿದ್ದಾರೆ ಇದರಿಂದ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯಲು ಸಾದ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.

ವಿದ್ಯಾರ್ಥಿಗಳ ಮೂಲಭೂತ ಬೇಡಿಕೆಗಳನ್ನು ಬಿಜೆಪಿ ಸರ್ಕಾರ ಈಡೇರಿಸುವಂತೆ ನಗರದ ವಿಶ್ವ ವಿದ್ಯಾನಿಲಯ ಹಾಗೂ ಸಂಯೋಜಿತ ಕಾಲೇಜುಗಳೊಂದಿಗೆ ಪ್ರತಿಭಟನೆ ನಡೆಸುತ್ತಿದು,್ದ ಪ್ರತಿಯೊಬ್ಬ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದು ಮನವಿ ಮಾಡಿದರು .

ಸುದ್ದಿಗೋಷ್ಠಿಯಲ್ಲಿ ಪವನ್, ಮುಬಾರಕ್, ಮುರುಳಿ ,ದೀಪು, ಸುಫಿಯಾನ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net