

ಚನ್ನರಾಯಪಟ್ಟಣ: ವಿದ್ಯಾರ್ಥಿಗಳ ಸಂಖ್ಯೆಯನ್ನು ಆಧರಿಸಿ ಆಂಗ್ಲ ಮಾಧ್ಯಮ ತರಗತಿ ತೆರೆಯಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ.ದೀಪಾ ತಿಳಿಸಿದರು.
ಪಟ್ಟಣದ ಕಸಬಾ ಹೋಬಳಿ ಶೆಟ್ಟಿಹಳ್ಳಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಟ್ರಾೃಕ್ ಸೂಟ್‌ಗಳನ್ನು ವಿತರಿಸಿ ಮಾತನಾಡಿದರು.ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ. ಮಕ್ಕಳಿಗೆ ಬಿಸಿಯೂಟ, ಸಮವಸ್ತ್ರ, ಪುಸ್ತಕ ಒದಗಿಸಲಾಗುತ್ತದೆ ಎಂದರು.
ಕ್ಷೇತ್ರ ಸಮನ್ವಯಾಧಿಕಾರಿ ಕೆ.ಎನ್.ಅನಿಲ್ ಮಾತನಾಡಿ, ಶಾಲೆಯ ಅಭಿವೃದ್ಧಿಗೆ ಶಿಕ್ಷಕರ ಜತೆ ಹಿರಿಯ ವಿದ್ಯಾರ್ಥಿಗಳೂ ಶ್ರಮಿಸುತ್ತಿದ್ದಾರೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ವಿ.ಜಿ. ದ್ಯಾವೇಗೌಡ ಮಾತನಾಡಿದರು.
ಬಿಆರ್‌ಪಿಗಳಾದ ಶಾಂತರಾಜ್, ತನುಜಾ, ಸಿಆರ್‌ಪಿ ಮಲ್ಲೇಶ್ ಹಾಗೂ ಸಹ ಶಿಕ್ಷಕರಾದ ಆರ್.ಶಶಿಕಲಾ, ವೈ.ಆರ್.ಕವಿತಾ, ಎಸ್‌ಡಿಎಂಸಿ ಅಧ್ಯಕ್ಷ ಗುರುರಾಜ, ಗ್ರಾಪಂ ಸದಸ್ಯ ಶ್ರೀನಿವಾಸ, ಕಸಬಾ ಹೋಬಳಿ ಸಾಹಿತ್ಯ ಪರಿಷತ್ ಅಧ್ಯಕ್ಷ ದಯಾನಂದ್‌ಹಾಗೂ ಪಾಲಕರು ಉಪಸ್ಥಿತರಿದ್ದರು.