ವಿದ್ಯಾರ್ಥಿಗಳ ಸಹಾಯಕ್ಕೆ ಮುಂದಾದ ರಿವರ್ ವ್ಯಾಲಿ

Published on

ಶ್ರೀರಂಗಪಟ್ಟಣ: ತಾಲೂಕಿನ ಹಳೇ ಕಿರಂಗೂರು ಗ್ರಾಮದ ಕೇಂಬ್ರಿಡ್ಜ್ ಶಾಲೆಯ ವಿದ್ಯಾರ್ಥಿಗಳಿಗೆ ನೆರವಾಗಲು ಪಟ್ಟಣದ ರಿವರ್ ವ್ಯಾಲಿ ಶಿಕ್ಷಣ ಸಂಸ್ಥೆ ಮುಂದಾಗಿದೆ.

ಪ್ರಸಕ್ತ ಶೈಕ್ಷಣಿಕ ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ನೆರವಾಗಲು ರಿವರ್ ವ್ಯಾಲಿ ಶಿಕ್ಷಣ ಸಂಸ್ಥೆ ಮುಂದಾಗಿದ್ದು, ಕೇಂಬ್ರಿಡ್ಜ್ ಶಾಲೆಯ ಎಲ್ಲ 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ದಾಖಲಾತಿ ಮಾಡಿಕೊಳ್ಳುವ ಜತೆಗೆ ಶಿಕ್ಷಣ ತರಬೇತಿ ನೀಡುವುದಾಗಿ ಸಂಸ್ಥೆ ಘೋಷಣೆ ಮಾಡಿದೆ.

ಈ ಕುರಿತು ರಿವರ್ ವ್ಯಾಲಿ ಸಂಸ್ಥೆಯ ಅಧ್ಯಕ್ಷ ಆರ್.ಆದರ್ಶ್ ಮಾತನಾಡಿ, ಪ್ರಸ್ತುತ ಕೇಂಬ್ರಿಡ್ಜ್ ಶಾಲೆ ಸಮಸ್ಯೆಗೆ ಒಳಗಾಗಿದ್ದು, ಈ ಪರಿಸ್ಥಿತಿಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಕಾಪಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದು, ನಮ್ಮ ಶಾಲೆಯ ಮಕ್ಕಳಂತೆಯೇ ಆ ಶಾಲೆಯ ಮಕ್ಕಳಿಗೂ ಈ ವರ್ಷದ ಪ್ರಸಕ್ತ ಸಾಲಿನ ವಿದ್ಯಾಭ್ಯಾಸಕ್ಕೆ ಯಾವುದೇ ಷರತ್ತುಗಳಿರದೆ ನೆರವಾಗಲು ಸಂಸ್ಥೆ ಮುಂದಾಗಲಿದೆ. ಆ ಶಾಲೆಯ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರು ಆತಂಕಕ್ಕೆ ಒಳಗಾಗದೆ ಸಂಸ್ಥೆಗೆ ಆಗಮಿಸಿ ವಿದ್ಯಾರ್ಥಿಗಳನ್ನು ದಾಖಲು ಮಾಡಬಹುದು ಎಂದು ಅವರು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net