ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ

Vpt-03-01-23
Published on

ವಿರಾಜಪೇಟೆ: ಉತ್ತಮ ಸೇವಾ ಮನೋಭಾವದಿಂದ ಬಿಲ್ಲವ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.

ತಾಲೂಕು ಬಿಲ್ಲವ ಸೇವಾ ಸಂಘದ ವತಿಯಿಂದ ಬಿಟ್ಟಂಗಾಲದ ಅಂಬಟ್ಟಿ ಬಳಿಯಿರುವ ಶ್ರೀ ನಾರಾಯಣಗುರು ಮಂದಿರದಲ್ಲಿ ಆಯೋಜಿಸಿದ್ದ ನಾರಾಯಣಗುರು ಜಯಂತಿ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದ ಅವರು, ನಾರಾಯಣಗುರುಗಳ ಜಯಂತಿ ಕೇವಲ ಆಚರಣೆಯಾಗಿ ಉಳಿಯದೆ ಅವರ ತತ್ವ ಸಿದ್ಧಾಂತಗಳನ್ನು ಅಳವಡಿಸಬೇಕೆಂದರು.

ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಬಿ.ಎಂ.ಗಣೇಶ್ ಮಾತನಾಡಿ, ಸಮುದಾಯದವರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವಂತಾಗಬೇಕು. ಇದಕ್ಕಾಗಿ ಬಿಲ್ಲವ ಸಮಾಜ ಪ್ರತಿವರ್ಷ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಸಮುದಾಯದ ಜನರು ಎಲ್ಲ ಕ್ಷೇತ್ರಗಳಲ್ಲೂ ಮುನ್ನಡೆಯಬೇಕು. ಶಿಕ್ಷಣಕ್ಕೆ ಆದ್ಯತೆ ನೀಡುವುದರೊಂದಿಗೆ ಸಂಘಟನೆಯು ಪ್ರಗತಿಯತ್ತ ಸಾಗಲು ಪರಸ್ಪರ ಸಹಕರಿಸಬೇಕು. ಸಮುದಾಯದ ಅಭಿವೃದ್ಧಿಗೆ ಸಂಘ ನಿಷ್ಪಕ್ಷಪಾತವಾಗಿ ಸೇವೆ ಸಲ್ಲಿಸಲಿದೆ. ರಾಜಕೀಯ ಸೇರಿದಂತೆ ಎಲ್ಲ ಕ್ಷೇತ್ರದಲ್ಲೂ ಜನಾಂಗದವರು ಮುಂದೆ ಬರಬೇಕು ಎಂದರು.

ಎಸ್‌ಎಸ್‌ಎಲ್‌ಸಿಯಲ್ಲಿ ಶೇ.80ಕ್ಕಿಂತಲೂ ಅಧಿಕ ಅಂಕ ಗಳಿಸಿದ ಎಸ್.ಅಕ್ಷಯಾ, ಬಿ.ಪಿ.ರಕ್ಷಾ, ತನ್ಮಯಿ ಕರ್ಕೆರ, ಬಿ.ನಿಹಾಲ್, ಕೃಶಿಕಾ, ಬಿ.ಎಸ್.ಅರ್ಚನಾ, ಆದರ್ಶ್, ದೀಪಿಕಾ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕಪಡೆದ ಶರಣ್ಯಾ, ಅಂಕಿತಾ, ಶನಾ ಸೋಮಪ್ಪ, ಚಂಶಿಕಾ ಹಾಗೂ ಎಂಕಾಂ ನಲ್ಲಿ ಅತ್ಯುನ್ನತ ಶ್ರೇಣೆಯಲ್ಲಿ ಪಾಸಾದ ಗಾನವಿ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಸಹಾಯವಾಗುವಂತೆ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮುಕುಂದ ಅವರು 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಸಂಘದ ಅಧ್ಯಕ್ಷರಿಗೆ ನೀಡಿದರು.

ಕಾರ್ಯಕ್ರಮದಲ್ಲಿ ಬಿಲ್ಲವ ಸೇವಾ ಸಂಘದ ಗೌರವಾಧ್ಯಕ್ಷ ಬಿ.ಆರ್.ರಾಜ, ಉಪಾಧ್ಯಕ್ಷ ಪುರುಷೋತ್ತಮ, ಕಾರ್ಯದರ್ಶಿ ಬಿ.ಎಸ್.ಜನಾರ್ಧನ, ಗೋಣ ಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮುಕುಂದ, ಬಿ.ನಾರಾಯಣ, ಖಜಾಂಚಿ ಬಿ.ಎಂ.ಸತೀಶ್, ಬಿ.ಡಿ.ಪ್ರೇಮಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net