ವಿದ್ಯಾರ್ಥಿಗಳಲ್ಲಿ ಕಡಿಮೆಯಾಗುತ್ತಿದೆ ಓದುವ ಹವ್ಯಾಸ

Screenshot_20230115_163654
Published on

ಹೊಳೆನರಸೀಪುರ: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳ ಓದುವ ಹವ್ಯಾಸ ಕಡಿಮೆಯಾಗುತ್ತಿದ್ದು, ಬಹುಪಾಲು ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ಮೈದಾನದಲ್ಲಿ ಆಟವಾಡಿ ಕಳೆಯುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆಯಲ್ಲ ಎಂದು ದೊಡ್ಡಕಾಡನೂರು ಜೆಎಸ್‌ಎಸ್ ಪ್ರೌಢಶಾಲೆಯ ಮುಖ್ಯಶಿಕ್ಷಕ ವಿ.ಎಸ್.ಮಾಲಿ ಪಾಟೀಲ್ ಕಳವಳ ವ್ಯಕ್ತಪಡಿಸಿದರು.


ತಾಲೂಕಿನ ದೊಡ್ಡಕಾಡನೂರು ಜೆಎಸ್‌ಎಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಯಾವುದೇ ವಿದ್ಯಾರ್ಥಿಗೆ ತಮ್ಮ ನಿಜವಾದ ಸಾಮರ್ಥ್ಯ ತಿಳಿಯದೇ ಹೋದಾಗ ಅವನು ತನ್ನ ಗುರಿಯನ್ನು ತಲುಪಲು ಸಾಧ್ಯವಾಗುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳಿಗೆ ಜ್ಞಾನ ಪಡೆದುಕೊಳ್ಳುವ ಆಸಕ್ತಿ ಇರಬೇಕು. ಯಾವುದು ಒಳ್ಳೆಯದು? ಯಾವುದು ಕೆಟ್ಟದ್ದು? ಎಂದು ಅರಿತುಕೊಳ್ಳುವ ಮನಸ್ಥಿತಿ ಇರಬೇಕು ಎಂದು ಕಿವಿಮಾತು ಹೇಳಿದರು.


ಪ್ರಾಂಶುಪಾಲ ಡಾ.ಚೌಡಯ್ಯ ಕಟ್ನವಾಡಿ ಮಾತನಾಡಿ, ದೊಡ್ಡಕಾಡನೂರು ಗ್ರಾಮದಲ್ಲಿ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರು ಜೆಎಸ್‌ಎಸ್ ಶಿಕ್ಷಣ ಸಂಸ್ಥೆ ಆರಂಭಿಸಿರುವುದರ ಫಲವಾಗಿ ಅನೇಕ ಜನರು ಈ ಶಿಕ್ಷಣ ಸಂಸ್ಥೆಯಲ್ಲಿ ಓದಿ, ಉನ್ನತ ಹುದ್ದೆಗಳಲ್ಲ್ಲಿದ್ದಾರೆ ಎಂದರು.

ದೊಡ್ಡಕಾಡನೂರು ಗ್ರಾಪಂ ಅಧ್ಯಕ್ಷೆ ಎಚ್.ಜೆ.ಶಿವಮ್ಮ ಅಧ್ಯಕ್ಷತೆ ವಹಿಸಿದ್ದರು. ಗ್ರಾಮದ ಮುಖಂಡರಾದ ತೇಜುಸ್ವಾಮಿ, ಕುಮಾರ್ ಏರ್‌ಟೆಲ್, ಉಪಾಧ್ಯಕ್ಷೆ ಮಂಜುಳಾ, ಗ್ರಾಪಂ ಸದಸ್ಯರಾದ ಪ್ರೀತಿ, ಗಾಯತ್ರಿ, ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net