ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಲು ಯುವ ಸಂಸತ್ ಕಾರ್ಯಕ್ರಮ

17 ckm 14
ಚಿಕ್ಕಮಗಳೂರು ತಾಪಂ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಯುವ ಸಂಸತ್ ಕಾರ್ಯಕ್ರಮವನ್ನು ಡಿಡಿಪಿಯು ಮಂಜುಳಾ ಉದ್ಘಾಟಿಸಿದರು. ಬಿ.ಮಹೇಶ್, ವಿಜಯ್ ಕುಮಾರ್, ಪ್ರದೀಪ್, ನವೀನ್ ಕುಮಾರ್, ಶಿವಕುಮಾರ್ ಉಪಸ್ಥಿತರಿದ್ದರು.
Published on

ಚಿಕ್ಕಮಗಳೂರು: ವಿದ್ಯಾರ್ಥಿ ದಿಸೆಯಿಂದಲೇ ಶಾಲಾ ಮಕ್ಕಳಿಗೆ ನಾಯಕತ್ವದ ಗುಣಗಳನ್ನು ಬೆಳೆಸುವುದು, ಸರ್ಕಾರ ಆಡಳಿತ ವೈಖರಿ ಮತ್ತಿತರ ವಿಷಯಗಳ ಬಗ್ಗೆ ಅರಿವು ಮೂಡಿಸುವ ಉz್ದೆÃಶದಿಂದ ಜಿಲ್ಲಾ ಮಟ್ಟದ ಯುವ ಸಂಸತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪದವಿ ಪೂರ್ವ ಇಲಾಖೆÉಯ ಉಪನಿರ್ದೇಶಕಿ ಮಂಜುಳ ತಿಳಿಸಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಸಂಸದೀಯ ವ್ಯವಹಾರಗಳ ಮತ್ತು ಶಾಸನ ರಚನಾ ಇಲಾಖೆ ಹಾಗೂ ಪದವಿ ಪೂರ್ವ ಇಲಾಖೆ ವತಿಯಿಂದ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ದೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜನಪ್ರತಿನಿಧಿ ಸಂಸ್ಥೆಗಳ ಪಾತ್ರದ ಬಗ್ಗೆ ಅರಿವು ಮೂಡಿಸುವುದು ವಿದ್ಯಾರ್ಥಿಗಳಲ್ಲಿ ಗ್ರಾಮ ಪಂಚಾಯಿತಿ, ತಾಲೂಕು, ಜಿಲ್ಲಾ ಪಂಚಾಯಿತಿ ವಿಧಾನಸಭಾ ಹಾಗೂ ಸಂಸತ್‌ಗಳಲ್ಲಿ ನಡೆಸುವ ಕಲಾಪಗಳ ಬಗ್ಗೆ ಪರಿಚಯಿಸುವುದು ಸೇರಿದಂತೆ ಪ್ರಜಾಪ್ರಭುತ್ವದ ಬುನಾದಿಯನ್ನು ಭದ್ರಪಡಿಸುವ ದಿಶೆಯಲ್ಲಿ ಎಲ್ಲರ ಅಭಿಪ್ರಾಯಕ್ಕೆ ಮನ್ನಣೆಯಿದೆ. ಭಾರತದ ಪ್ರಜಾಪ್ರಭುತ್ವದ ಆಡಳಿತದ ಬಗ್ಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉz್ದÉÃಶವಾಗಿದೆ ಎಂದರು.

ಸಮಾಜದಲ್ಲಿರುವ ಪ್ರಚಲಿತ ಸಮಸ್ಯೆಗಳನ್ನು ತೆಗೆದುಕೊಂಡು ಅಣುಕು ಸಂಸತ್ ಕಲಾಪಗಳನ್ನು ಆಯೋಜಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ವಿವಿಧ ಪಾತ್ರಗಳನ್ನು ನೀಡಿ ಅವರಿಗೆ ಕಲಾಪಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಿದರು.

ಮೂಡಿಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಬಿ.ಮಹೇಶ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲೂಕು ಹಂತದಿAದ ಶಾಲಾ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಸಂಸತ್ ಹಾಗೂ ಸಂಸತ್ ಕಾರ್ಯ ವೈಖಾರಿ ಬಗ್ಗೆ ಮಾಹಿತಿ ನೀಡಲಾಗಿದೆ. ಇದಕ್ಕಾಗಿ ಜಿಲ್ಲೆಯ ವಿವಿಧ ಶಾಲೆಗಳಿಂದ ಮಕ್ಕಳನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಯುವ ಸಂಸತ್ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ, ಸಂಸತ್ ಮಾದರಿಯಲ್ಲಿ ಅವರಿಗೆ ಕೊಟ್ಟ ಜವಾಬ್ದಾರಿಯನ್ನು ಸಮಪರ್ಕವಾಗಿ ನಿರ್ವಹಿಸಿದ್ದಾರೆ ಎಂದರು.

ಈ ಕಾರ್ಯಕ್ರಮದಲ್ಲಿ ಸಂಸತ್ ಸಭೆಯಲ್ಲಿ ನಡೆಯುತ್ತಿದ್ದ ಕಲಾಪಗಳನ್ನು ಆಸೀನರಾಗಿದ್ದ ವಿದ್ಯಾರ್ಥಿಗಳು ಆಸಕ್ತಿಯಿಂದ ಆಲಿಸಿ ವಾಕ್‌ಚಾತುರ್ಯದ ಮೂಲಕ ಹಲವು ವಿದ್ಯಾರ್ಥಿಗಳು,ತೀರ್ಪುದಾರರು ಮತು ಉಪನ್ಯಾಸಕರುಗಳ ಗಮನ ಸೆಳೆದಿದೆ ಎಂದು ಹೇಳಿದರು

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿಜಯ್ ಕುಮಾರ್, ಬೀರೂರು ಕೆ .ಎಲ್ ಕಾಲೇಜು ಉಪನ್ಯಾಸಕ ಬಿ.ವಿ.ಪ್ರದೀಪ್, ಉಪನ್ಯಾಸಕ ಶಿವಕುಮಾರ್, ನವೀನ್ ಕುಮಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net