

ಬೈಂದೂರು:
ಶಾಲಾ, ಕಾಲೇಜುಗಳಲ್ಲಿ ವಿವಿಧ ಧರ್ಮ, ಭಾಷೆ, ಸಂಸ್ಕೃತಿಯ ಮಕ್ಕಳು ಆಗಮಿಸುವುದರಿಂದ ಇಡೀ ಭಾರತವನ್ನೇ ಪುಟ್ಟ ತರಗತಿಯೊಳಗೆ ಕಾಣುತ್ತೇವೆ. ಇಂತಹ ಸನ್ನಿವೇಶದಲ್ಲಿ ವಿದ್ಯಾರ್ಥಿಗಳು ಸಹಿಷ್ಣುತೆ ರೂಢಿಸಿಕೊಂಡರೆ ಭವಿಷ್ಯದಲ್ಲಿ ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕಾರಿ ಎಂದು ಕತೆಗಾರ ಡಾ.ಶ್ರೀಧರ ಬಳಗಾರ ಹೇಳಿದರು.
ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಐಕ್ಯೂಎಸಿ ಸಹಯೋಗದಲ್ಲಿ ಬುಧವಾರ ಜ್ಞಾನದೀಪ್ತಿ ಪ್ರೇರಣಾ ಕಾರ್ಯಕ್ರಮ ಉದ್ಘಾಟಿಸಿ ಶಿಕ್ಷಣದಲ್ಲಿ ಸಾಂವಿಧಾನಿಕ ಮೌಲ್ಯಗಳ ಪ್ರಸ್ತುತಿ ಮತ್ತು ಸ್ವಯಂ ಅರಿವು ಬಗ್ಗೆ, ವಿದ್ಯಾರ್ಥಿಗಳಿಗೆ ಸಾಧನೆಯ ಪಥದಲ್ಲಿ ಆಂತರಿಕ ಪ್ರೇರಣೆಯ ಅವಶ್ಯಕತೆ ಬಗ್ಗೆ ಮಾತನಾಡಿದರು.
ಉಡುಪಿ ಜಿಲ್ಲಾಮಟ್ಟದ ಅಂತರ್ ಕಾಲೇಜು ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಾದ ಅಕ್ಷತಾ, ಸುಹರ್ಷಿಣಿ, ಕೃಷ್ಣರಾಜ್ ಮತ್ತು ಕಿರಣ ಅವರಿಗೆ ಬಹುಮಾನ ವಿತರಿಸಲಾಯಿತು. ಪ್ರಾಂಶುಪಾಲ ನಾಗರಾಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಪ್ರಾಧ್ಯಾಪಕಿ ಗೀತಾ ಸಂದಿಗೋಡಮಠ ಕಾರ್ಯಕ್ರಮ ನಿರ್ವಹಿಸಿದರು.