ವಿದ್ಯಾರ್ಥಿಗಳಿಂದ ಶಿಕ್ಷಕರು, ಪಾಲಕರ ಪಾದ ಪೂಜೆ

Arunodaya School - Copy
Published on

ಬೀದರ್: ಗುರು ಪೂರ್ಣಿಮೆ ನಿಮಿತ್ತ ಇಲ್ಲಿಯ ಅರುಣೋದಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಪಾಲಕರ ಪಾದಪೂಜೆ ಮಾಡಿದರು.
ಶಾಲೆಯಲ್ಲಿ ಆಯೋಜಿಸಿದ್ದ ಗುರು ಪೂರ್ಣಿಮೆ ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ಪಾಲಕರ ಹಣೆಗೆ ತಿಲಕವಿಟ್ಟು, ಪಾದಕ್ಕೆ ನಮಸ್ಕರಿಸಿ, ಆರತಿ ಬೆಳಗಿ ಭಕ್ತಿ ಸಮರ್ಪಿಸಿದರು.
ಗುರು-ಶಿಷ್ಯ ಸಂಬಂಧ ಬಹಳ ಪವಿತ್ರವಾದದ್ದು ಎಂದು ಕಾರ್ಯಕ್ರಮ ಉದ್ಘಾಟಿಸಿದ ವಿಶ್ವ ಹಿಂದೂ ಪರಿಷತ್ ಉತ್ತರ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಮಕೃಷ್ಣ ಸಾಳೆ ಹೇಳಿದರು.
ವಿದ್ಯಾರ್ಥಿಗಳು ಅಕ್ಷರ ಕಲಿಸಿದ ಗುರು ಹಾಗೂ ಪಾಲಕರನ್ನು ಸದಾ ಗೌರವಿಸಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಶಾಲೆಯ ಆಡಳಿತಾಧಿಕಾರಿ ಸಂತೋಷಕುಮಾರ ಮಂಗಳೂರೆ ನುಡಿದರು.
ವಿದ್ಯಾರ್ಥಿಗಳಾದ ಅಭಿಷೇಕ ಚಂದ್ರಕಾಂತ, ಶಿವಾನಂದ ಪ್ರಶಾಂತ ಮಾತನಾಡಿದರು. ಮಕ್ಕಳಿಂದ ನಡೆದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ಗಮನ ಸೆಳೆದವು.
ಪ್ರೌಢಶಾಲೆ ಮುಖ್ಯಶಿಕ್ಷಕಿ ಈಶ್ವರಿ ಬೇಲೂರೆ, ಶಿಕ್ಷಕರು ಇದ್ದರು. ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಬಸವರಾಜ ಮುಗುಟಾಪುರೆ ಸ್ವಾಗತಿಸಿದರು. ನೀಲಮ್ಮ ಗಜಲೆ ನಿರೂಪಿಸಿದರು. ಜ್ಯೋತಿ ಸಂಗೋಳಗಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net