ವಿದ್ಯಾರ್ಥಿಗಳಿಗೆ ಅನವಶ್ಯಕ ಒತ್ತಡ ಸಲ್ಲದು

10M.D.R.1
Published on

ಮದ್ದೂರು: ಶಾಲೆಗಳು ವಿದ್ಯಾರ್ಥಿಗಳ ಮೇಲೆ ಅನವಶ್ಯಕವಾಗಿ ಒತ್ತಡಗಳನ್ನು ಹೇರುತ್ತಿರುವುದು ಸರಿಯಲ್ಲ ಎಂದು ಮಂಡ್ಯ ಲಯನ್ಸ್ ಪಿಡಿಎಫ್ ಸಂಸ್ಧೆಯ ಅಧ್ಯಕ್ಷ ಸಿ.ಪಿ.ಅನಂತ್‌ಕುಮಾರ್ ಹೇಳಿದರು.


ಪಟ್ಟಣದ ಎಚ್.ಕೆ.ವೀರಣ್ಣಗೌಡ ಪದವಿಪೂರ್ವ ಕಾಲೇಜಿನಲ್ಲಿ ಗುರವಾರ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಿಇಟಿ ಕಲಿಕಾ ಪುಸ್ತಕಗಳನ್ನು ವಿತರಿಸಿ ಮಾತನಾಡಿದರು. ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯನ್ನು ಹೊಂದಿ ನಿರಂತರ ಅಭ್ಯಾಸ ನಡೆಸುವ ಮೂಲಕ ಗುರಿ ಮುಟ್ಟಬೇಕು. ಸ್ವಾಮಿ ವಿವೇಕಾನಂದರ ಆಶಯದಂತೆ ವಿದ್ಯಾರ್ಥಿಯ ಏಕಾಗ್ರತೆ ವೃದ್ಧಿಗೆ ವಿಶೇಷ ತರಬೇತಿ ನೀಡಿದರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಗಳಿಸಬಹುದು ಎಂದರು.


ಎಂ.ಎಚ್.ಚನ್ನೇಗೌಡ ವಿದ್ಯಾಸಂಸ್ಧೆಯ ಕಾರ್ಯದರ್ಶಿ ಸಿ.ಅಪೂರ್ವ ಚಂದು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಅಭ್ಯಾಸ ಕೇವಲ ಪರೀಕ್ಷೆಗಳಿಗೆ ಸೀಮಿತವಾಗಬಾರದು ಎಂದು ಹೇಳಿದರು.


ಲಯನ್ ಮಂಜು, ಕಸಾಪ ತಾಲೂಕು ಮಾಜಿ ಅಧ್ಯಕ್ಷ ಕೆ.ಎಸ್. ಸುನೀಲ್‌ಕುಮಾರ್, ಪ್ರಾಂಶುಪಾಲರಾದ ಜಿ.ಎಸ್.ಶಂಕರೇಗೌಡ, ಯು.ಎಸ್.ಶಿವಕುಮಾರ್, ಉಪಪ್ರಾಂಶುಪಾಲೆ ಜಿ.ಎಸ್.ನಂದಿನಿ, ಉಪನ್ಯಾಸಕರಾದ ನವೀನ್‌ಕುಮಾರ್, ಮೋಹನ್‌ಕುಮಾರ್, ಸುದರ್ಶನ್, ಯಶಸ್ವಿನಿ, ಚೌಡಯ್ಯ, ಸಂಜನಾ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net