ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ

25 YERRISWAMY 01
????????????????????????????????????
Published on

ಬಳ್ಳಾರಿ : ಕೇಂದ್ರ ಸರ್ಕಾರದ ಮೂರು ಹೊಸ ಕಾನೂನುಗಳ ಬಗ್ಗೆ ಕಾರ್ಯಾಗಾರ ಇರುವುದರಿಂದ ಕಾನೂನು ವಿದ್ಯಾರ್ಥಿಗಳಿಗೆ ತುಂಬಾ ಉಪಯುಕ್ತವಾಗಲಿದೆ ಎಂದು ವಿಎಸ್‌ಲಾ ಕಾಲೇಜು ಅಧ್ಯಕ್ಷ ನರೇಂದ್ರಬಾಬು ಹೇಳಿದರು.
ನಗರದ ವಿಎಸ್‌ಲಾ ಕಾಲೇಜು ಸಭಾಂಗಣದಲ್ಲಿ ಕೇಂದ್ರ ಸಂವಹನ ಇಲಾಖೆ, ವುಂಕಿ ಸಣ್ಣ ರುದ್ರಪ್ಪ ಕಾನೂನು ಮಹಾವಿದ್ಯಾಲ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ನಡೆದ ಭಾರತೀಯ ನ್ಯಾಯ ಸಂಹಿತೆ 2023ರ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಹೊಸ ಕಾನೂನುಗಳು ಇಡೀ ನ್ಯಾಯ ವ್ಯವಸ್ಥೆಗೆ ಕಾಯಕಲ್ಪ ನೀಡಿದೆ ಎಂದರು.
ಕಾಲೇಜು ಪ್ರಾಚಾರ್ಯೆ ಡಾ.ಕೆ. ರಂಜನಿ ಕುಮಾರಿ, ವಕೀಳ ಗುರು ಬಸವರಾಜ, ದೂರದರ್ಶನ ಇಲಾಖೆಯ ನಿವೃತ್ತ ಉಪನಿರ್ದೇಶಕ ಡಾ.ಕೆ. ಸುಧಾಕರ್ ರಾವ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಂಗೀತ ಮತ್ತು ನಾಟಕ ವಿಭಾಗದ ನೇತ್ರ ಕಲಾ ಸಂಘ ತಂಡದಿಂದ ಜಾಗೃತಿ ಗೀತೆ ಹಾಗೂ ಮೂರು ಹೊಸ ಕಾನೂನುಗಳ ಬಗ್ಗೆ ನಾಟಕದ ಮೂಲಕ ಪ್ರದರ್ಶನ ನೀಡಿ ಜಾಗೃತಿಗೊಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net