ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ

bus
Published on

ಬೆಳಗಾವಿ:ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗಳಿಗಳು ಸೆ. 21 2023 ರಿಂದ ಸೆ. 02 2023 ರವರೆಗೆ ನಡೆಯಲಿರುವುದರಿಂದ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ದಿನಗಳಂದು ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ನಿರ್ವಾಹಕರಿಗೆ ದ್ವಿತೀಯ ಪಿಯುಸಿಯ 2ನೇ ಪೂರಕ ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಪರೀಕ್ಷೆ ಮುಗಿಸಿ ವಾಸಸ್ಥಳಕ್ಕೆ ಹಿಂದಿರುಗಲು ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net