

ವಿಜಯವಾಣಿ ಸುದ್ದಿಜಾಲ ಧಾರವಾಡ
ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಪ್ರಾಶಸ್ತ್ಯ ನೀಡದೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು. ಸೋಲು- ಗೆಲುವಿನ ಬಗ್ಗೆ ಚಿಂತಿಸದೆ ಸ್ಪರ್ಧೆಯಲ್ಲಿ ಭಾಗವಹಿಸುವುದು ಅತ್ಯವಶ್ಯಕ ಎಂದು ಅಣ್ಣಿಗೇರಿ ಸೇವಾ ಟ್ರಸ್ಟ್ ಸಂಸ್ಥೆಯ ಅಧ್ಯಕ್ಷ ಪ್ರೊ. ನಾಗೇಶ ಅಣ್ಣಿಗೇರಿ ಹೇಳಿದರು.
ನಗರದ ವೈ.ಬಿ. ಅಣ್ಣಿಗೇರಿ ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಚಾಣಕ್ಯ ಕ್ವಿಜ್ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.
ವೈ.ಬಿ. ಅಣ್ಣಿಗೇರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಮಹಾಬಳೇಶ್ವರ ಚಿಟ್ಟಿ ಮÁತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳೂ ಮಹತ್ವ ಪಡೆದಿದೆ. ವಿದ್ಯಾರ್ಥಿಗಳು ಸಮಯದ ಪರಿಪಾಲನೆ, ಸತತ ಪರಿಶ್ರಮ ಹಾಗೂ ನಿರಂತರ ಓದುವಿಕೆ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ನಗರದ ೧೦ಕ್ಕೂ ಹೆಚ್ಚು ಪದವಿ ಪೂರ್ವ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜೆ.ಎಸ್.ಎಸ್. ಹುಕ್ಕೇರಿಕರ ಪದವಿ ಪೂರ್ವ ಮಹಾವಿದ್ಯಾಲಯ ಪ್ರಥಮ, ಜೆ.ಎಸ್.ಎಸ್. ಎಸ್.ಎಂ. ಪಿಯು ಕಾಲೇಜು ದ್ವಿತೀಯ ಮತ್ತು ಐ.ಸಿ.ಎಸ್. ಮಹೇಶ ಪದವಿ ಪೂರ್ವ ಮಹಾವಿದ್ಯಾಲಯದ ತಂಡ ತೃತೀಯ ಸ್ಥಾನ ಪಡೆಯಿತು.
ಪ್ರಾಚಾರ್ಯ ಡಾ. ಚಿದಾನಂದ ಬಡಿಗೇರ, ಪ್ರೊ. ಬಸವರಾಜ ಕೋಟೂರ, ಪ್ರೊ. ರಾಽಕಾ ಕಾಮತ್, ಪ್ರೊ. ಅರುಣಕುಮÁರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.