

ಹಾಸನ : ಡಾ.ಬಾಬು ಜಗಜೀವನ್ ರಾಮ್ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆ.26ರಂದು ಆಯೋಜಿಸಲಾಗಿದೆ ಎಂದು ಸಂಘದ ಗೌರವಧ್ಯಕ್ಷ ಕೆ.ಎನ್.ಶಿವಣ್ಣ ತಿಳಿಸಿದರು.
ಆ.26ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಹಾಸನ ನಗರದ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಮುದಾಯದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುತಿ ಪ್ರತಿಭಾವಂತ ಮಕ್ಕಳಿಗೆ ಶೈಕ್ಷಣಿಕವಾಗಿ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ, ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ, ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್, ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಆರ್. ಧರ್ಮಸೇನ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಸಮುದಾಯದ ಬಾಂಧವರು, ಸಮಾಜದ ಮುಖಂಡರು, ಸಂಘಟನೆಗಳ ಮುಖಂಡರು ಹಾಗೂ ವಿವಿಧ ಸಂಘಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಾವಂತ ಮಕ್ಕಳನ್ನು ಪ್ರೋತ್ಸಾಹಿಸಿ, ಜನಾಂಗದ ಏಳಿಗೆಗಾಗಿ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಮರಿಸ್ವಾಮಿ, ರಂಗಸ್ವಾಮಿ, ವೆಂಕಟೇಶ್ ಸೇರಿದಂತೆ ಇತರರು ಹಾಜರಿದ್ದರು.